ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಡಾಖ್‌ನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿ, 90 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆಗೆ ಮೂಲ ಕಾರಣ ಸೋನಮ್ ವಾಂಗ್‌ಚುಕ್ ಎಂದು ಆರೋಪಿಸಿ, ಲೇಹ್ ಪೊಲೀಸರು ಶುಕ್ರವಾರ ಅವರನ್ನು ಬಂಧಿಸಿದ್ದಾರೆ.
ಲೆಹ್ ಅಪೆಕ್ಸ್ ಬಾಡಿ ಮತ್ತು ಕಾರ್ಗಿಲ್ ಡೆಮಾಕ್ರಟಿಕ್ ಅಲೈಯನ್ಸ್ ಜೊತೆಗೂಡಿ ವಾಂಗ್ಚುಕ್ ನೇತೃತ್ವದಲ್ಲಿ ಲಡಾಖ್‌ಗೆ ಪೂರ್ಣ ರಾಜ್ಯ ಸ್ಥಾನಮಾನಕ್ಕೆ ಪ್ರತಿಭಟನೆ ನಡೆಸಲಾಗಿತ್ತು.
ಈ ಬೇಡಿಕೆಗಳನ್ನು ಮುಂದಿಟ್ಟುಕೊಂಡು, ವಾಂಗ್‌ಚುಕ್ ಸೆಪ್ಟೆಂಬರ್ 10, 2025 ರಂದು ಉಪವಾಸ ಸತ್ಯಾಗ್ರಹವನ್ನು ಪ್ರಾರಂಭಿಸಿದ್ದರು. ಬುಧವಾರ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯ ತಡರಾತ್ರಿ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಲಡಾಖ್ ಗೆ ರಾಜ್ಯದ ಸ್ಥಾನಮಾನ ಮತ್ತು ಸಾಂವಿಧಾನಿಕ ರಕ್ಷಣೆಗೆ ಒತ್ತಾಯಿಸಿ ಉಪವಾಸ ನಡೆಸುತ್ತಿದ್ದ ವಾಂಗ್ಚುಕ್ ನೀಡಿದ ಹೇಳಿಕೆಗಳು ಯುವಕರನ್ನು ಹಿಂಸಾಚಾರಕ್ಕೆ ಪ್ರಚೋದಿಸಿದೆ ಎಂದು ಹೇಳಿದೆ. ಗೃಹ ಸಚಿವಾಲಯವು ಅಧಿಕೃತವಾಗಿ SECMOL ನ ಪರವಾನಗಿಯನ್ನು ರದ್ದುಪಡಿಸುವ ತೀರ್ಮಾನ ಕೈಗೊಂಡಿದೆ.