September 10, 2026
Thursday, September 10, 2026
spot_img

ಕಾಂತಾರ ಚಾಪ್ಟರ್-1 ಹೈದರಾಬಾದ್ ಪ್ರೀ-ರಿಲೀಸ್ ಇವೆಂಟ್‌ಗೆ ಸಾಥ್‌ ಕೊಟ್ಟ ಜ್ಯೂ. ಎನ್‌ಟಿಆರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ಕಾಂತಾರ ಚಾಪ್ಟರ್-1 ಸಿನಿಮಾ ಇದೇ ಅಕ್ಟೋಬರ್ 2 ರಂದು ವಿಶ್ವದಾದ್ಯಂತ ತೆರೆ ಕಾಣಲು ಸಿದ್ಧವಾಗಿದೆ.

ಸದ್ಯ ಟ್ರೈಲರ್ ಮೂಲಕ ಗಮನ ಸೆಳೆದಿರುವ ಕಾಂತಾರ ಸಿನಿಮಾ ತಂಡ ಪ್ಯಾನ್ ಇಂಡಿಯಾ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದೆ. ಹೈದರಾಬಾದ್‌ನಲ್ಲಿ ಇವೆಂಟ್ ಇದೇ ಸೆ.28 ರಂದು ನಡೆಯಲಿದೆ. ಈ ಇವೆಂಟ್‌ಗೆ ಮುಖ್ಯ ಅತಿಥಿಯಾಗಿ ನಟ ಜೂ.ಎನ್‌ಟಿಆರ್ ಆಗಮಿಸಲಿದ್ದಾರೆ.‌

ಜೂ.ಎನ್‌ಟಿಆರ್ ಹಾಗೂ ರಿಷಬ್ ಶೆಟ್ಟಿ ಅವರ ನಡುವೆ ಸಿನಿಮಾ ಇಂಡಸ್ಟ್ರಿ ಸ್ನೇಹ ಹೊರತುಪಡಿಸಿ ವೈಯಕ್ತಿಕವಾಗಿ ಉತ್ತಮವಾದ ಭಾಂದವ್ಯವಿದೆ. ಹೀಗಾಗಿ, ಕಾಂತಾರ ಸಿನಿಮಾದ ಪ್ರಮೋಷನ್‌ನಲ್ಲಿ ಜೂ.ಎನ್‌ಟಿಆರ್ ಭಾಗಿಯಾಗಲಿದ್ದಾರೆ. ಸೆ‌.28 ರಂದು ಹೈದರಾಬಾದ್‌ನಲ್ಲಿ ಅದ್ದೂರಿಯಾಗಿ ಕಾರ್ಯಕ್ರಮ ನಡೆಯಲಿದ್ದು, ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಸೇರಿದಂತೆ ಇಡೀ ಚಿತ್ರತಂಡ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಲಿದೆ. 

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !