Friday, September 26, 2025

SHOCKING | ಉಕ್ಕಿನ ಸ್ಥಾವರದಲ್ಲಿ ಭೀಕರ ಅವಘಡ: ಛಾವಣಿ ಕುಸಿದು 6 ಕಾರ್ಮಿಕರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದಲ್ಲಿನ ಖಾಸಗಿ ಉಕ್ಕಿನ ಸ್ಥಾವರವೊಂದರಲ್ಲಿ ಕಟ್ಟಡ ಕುಸಿದು ಕನಿಷ್ಠ ಆರು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಛತ್ತೀಸ್‌ಗಢ ರಾಜಧಾನಿಯ ಹೊರವಲಯದಲ್ಲಿರುವ ಸಿಲ್ತಾರಾ ಕೈಗಾರಿಕಾ ಪ್ರದೇಶದಲ್ಲಿರುವ ಗೋದಾವರಿ ಇಸ್ಪಾತ್ ಲಿಮಿಟೆಡ್ ಫ್ಯಾಕ್ಟರಿಲ್ಲಿ ಈ ಘಟನೆ ನಡೆದಿದೆ. ಕಟ್ಟಡ ಕುಸಿತದ ಬಳಿಕ ರಕ್ಷಣಾ ಕಾರ್ಯಾಚರಣೆಯನ್ನು ತಕ್ಷಣವೇ ಪ್ರಾರಂಭಿಸಲಾಯಿತು ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ತಿಳಿದ ಕೂಡಲೇ ಪೊಲೀಸ್ ತಂಡವನ್ನು ಸ್ಥಳಕ್ಕೆ ಕಳುಹಿಸಲಾಯಿತು ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು.

.

ಇದನ್ನೂ ಓದಿ