March 4, 2026
Wednesday, March 4, 2026
spot_img

ಕಲಬುರಗಿಯಲ್ಲಿ ನಿರಂತರ ಮಳೆ: ಎರಡು ದಿನಗಳ ಕಾಲ ಶಾಲೆಗಳಿಗೆ ರಜೆ ಘೋಷಣೆ

ಹೊಸದಿಗಂತ ಕಲಬುರಗಿ

ಹವಾಮಾನ ಇಲಾಖೆಯು ಮುಂದಿನ ೪೮ ಗಂಟೆಗಳ ಕಾಲ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ, ಮಕ್ಕಳ ಹಿತದೃಷ್ಟಿಯಿಂದ ಎರಡು ದಿನಗಳ ಕಾಲ (ಸೆ. 27,28) ಶಾಲೆಗಳಿಗೆ ರಜೆ ಘೋಷಿಸಿ, ಜಿಲ್ಲಾಧಿಕಾರಿಗಳ ಆದೇಶದಂತೆ ಡಿಡಿಪಿಐ ಸೂರ್ಯಕಾಂತ ಮದಾನೆ ಆದೇಶ ಹೊರಡಿಸಿದ್ದಾರೆ.

ಕಲಬುರಗಿ ಜಿಲ್ಲೆಯಾದ್ಯಂತ ಈಗಾಗಲೇ ಭಾರಿ ಮಳೆಯಾಗುತ್ತಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ.ಪ್ರಯುಕ್ತ ಶಾಲೆಗಳಿಗೆ ಈಗಾಗಲೇ ದಸರಾ ರಜೆಯಿದ್ದು, ಜಿಲ್ಲೆಯ ಕೆಲವು ಶಾಲೆಗಳ ಆಡಳಿತ ಮಂಡಳಿ ದಸರಾ ರಜೆಯಿಂದ ವಿನಾಯಿತಿ ಪಡೆದುಕೊಂಡು ಶಾಲೆಗಳನ್ನು ನಡೆಸುತ್ತಿರುವ ಸದರಿ ಶಾಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಮತ್ತು ಮಕ್ಕಳ ಸುರಕ್ಷತೆ ಹಿತದೃಷ್ಟಿಯಿಂದ ಸೆ.27 ಹಾಗೂ 28ರಂದು ಎರಡು ದಿನ ಕಾಲ ರಜೆ ಘೋಷಿಸಿ ಆದೇಶ ಹೊರಡಿಸಿದ್ದು,ಸದರಿ ರಜಾ ಅವಧಿಯ ಪಾಠ ಬೋಧನೆಯನ್ನು ಮುಂದಿನ ರಜಾ ದಿನಗಳಲ್ಲಿ ಸರಿದೂಗಿಸಲು ಸೂಚಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !