Saturday, September 27, 2025

ಅಡುಗೆ ಸಿಲಿಂಡರ್‌ ಸ್ಫೋಟ: ಒಂದೇ ಕುಟುಂಬದ 8 ಮಂದಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಡುಗೆ ಸಿಲಿಂಡರ್‌ ಸ್ಫೋಟಗೊಂಡ ಪರಿಣಾಮ ಒಂದೇ ಕುಟುಂಬದ 8 ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೋಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ನಡೆದಿದೆ.

ಮನೆಯಲ್ಲಿ ಎಲ್ಲರೂ ಮಲಗಿರುವಾಗ ಬೆಳಗ್ಗಿನ ಜಾವ ಘಟನೆ ನಡೆದಿದೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆಯೇ ಕುಸಿದಿದ್ದು, ಒಂದೇ ಕುಟುಂಬದ 8 ಮಂದಿ ಗಾಯಗೊಂಡಿದ್ದಾರೆ.

ಸದ್ಯ ಗಾಯಾಳುಗಳನ್ನ‌ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು ಸಂಜೀವಿನಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಘಟನಾ ಸ್ಥಳ ಪರಿಶೀಲಿಸಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ.