Tuesday, December 2, 2025

ಬಾಗಲಕೋಟೆಯಲ್ಲಿ ರಣಭೀಕರ ಮಳೆಗೆ ಮನೆಯ ಮೇಲ್ಛಾವಣಿ, ಗೋಡೆ ಕುಸಿತ: ಬಾಲಕ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣದಲ್ಲಿ ಶುಕ್ರವಾರ ರಾತ್ರಿ ಸುರಿದ ನಿರಂತರ ಮಳೆಗೆ ಮನೆಯ ಮೇಲ್ಛಾವಣಿ ಹಾಗೂ ಗೋಡೆ ಕುಸಿದು ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ.

ದರ್ಶನ್ ಲಾತೂರ್ (11) ಮೃತ ಬಾಲಕ. ಘಟನೆಯಲ್ಲಿ ಇನ್ನೊಬ್ಬ ಬಾಲಕ ಶ್ರೀಶೈಲ ಗಾಯಗೊಂಡಿದ್ದು, ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಕ್ಕಳು ತಾಯಿಯೊಂದಿಗೆ ಮಲಗಿದ್ದರು. ಬೆಳಗ್ಗೆ ತಾಯಿ ಎದ್ದು ಬೇರೆ ಕೊಠಡಿಗೆ ಬರುತ್ತಲೇ ಮನೆಯ ಗೋಡೆ ಕುಸಿದು ಬಿದ್ದಿದೆ. ಸ್ಥಳಕ್ಕೆ ಕಂದಾಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!