Saturday, September 27, 2025

ಬೆಂಗಳೂರಿಗರಿಗೆ ಸಿಕ್ತು ಬಂಪರ್ ಉಡುಗೊರೆ: ಕಡೆಗೂ ಈಡೇರಿದ 30 ವರ್ಷದ ಬೇಡಿಕೆ, ಏನದು ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲಿಗೆ ಕೇಂದ್ರ ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ ಎಂದು ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದಾರೆ. ಈ ಅನುಮೋದನೆಯಿಂದ 30 ವರ್ಷಗಳ ಬೇಡಿಕೆ ಈಡೇರಿಸಲಾಗಿದೆ.

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಬೆಂಗಳೂರು ಮತ್ತು ಮುಂಬೈ ನಡುವೆ ನಾವು ಶೀಘ್ರದಲ್ಲೇ ಸೂಪರ್‌ಫಾಸ್ಟ್ ರೈಲನ್ನು ಪ್ರಾರಂಭಿಸಲಿದ್ದೇವೆ ಎಂದು ಘೋಷಣೆ ಮಾಡಿದ್ದಾರೆ. ಎರಡೂ ನಗರಗಳು ಪ್ರಮುಖ ಆರ್ಥಿಕ ಕೇಂದ್ರಗಳಾಗಿದ್ದು, ಅವುಗಳ ನಿಲ್ದಾಣಗಳಲ್ಲಿನ ಸಾಮರ್ಥ್ಯದ ವಿಸ್ತರಣೆಯಿಂದಾಗಿ ಇದು ಈಗ ಸಾಧ್ಯವಾಗಿದೆ ಎಂದಿದ್ದಾರೆ ಎಂದು ತೇಜಸ್ವಿ ಸ್ಪಷ್ಟಪಡಿಸಿದ್ದಾರೆ.

ಕಳೆದ ಮೂರು ದಶಕಗಳಲ್ಲಿ ಎರಡೂ ನಗರಗಳ ಬೆಳವಣಿಗೆಯ ಹೊರತಾಗಿಯೂ, ಬೆಂಗಳೂರು ಮತ್ತು ಮುಂಬೈ ನಡುವೆ ಕೇವಲ ಒಂದು ಸೂಪರ್‌ಫಾಸ್ಟ್ ರೈಲು ಮಾತ್ರ ಇತ್ತು. ಕಳೆದ ವರ್ಷವೊಂದರಲ್ಲೇ 26 ಲಕ್ಷಕ್ಕೂ ಹೆಚ್ಚು ಜನರು ಈ ಎರಡು ನಗರಗಳ ನಡುವೆ ವಿಮಾನದಲ್ಲಿ ಪ್ರಯಾಣಿಸಿದ್ದಾರೆ. ಈ ಹೊಸ ಸೇವೆಯು ಲಕ್ಷಾಂತರ ನಾಗರಿಕರಿಗೆ ಪ್ರಯಾಣವನ್ನು ಹೆಚ್ಚು ಕೈಗೆಟುಕುವ ದರದಲ್ಲಿ ಅನುಕೂಲಕರವಾಗಿಸಲಿದೆ ಎಂದು ಹೇಳಿದ್ದಾರೆ.