ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಮೀಕ್ಷೆಯಲ್ಲಿ ಪಾಲ್ಗೊಳ್ಳದಿದ್ದರೆ ಸಿಎಂ ಕ್ರಮ ಕೈಗೊಳ್ಳುವ ಧಮ್ಕಿ ಹಾಕಿದ್ದಾರೆ. ಮೊದಲು ಗಣತಿದಾರರು, ಶಿಕ್ಷಕರ ಸಮಸ್ಯೆ ಬಗೆಹರಿಸಿ ಎಂದು ಪರಿಷತ್ ಸದಸ್ಯ ಸಿ.ಟಿ ರವಿ ತಿರುಗೇಟು ನೀಡಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಮೀಕ್ಷೆ ಆಪ್‌ನಲ್ಲಿ ಸಮಸ್ಯೆ ಇದೆ, ಒಟಿಪಿ ಸಮಸ್ಯೆ ಇದೆ, ಸೀರಿಯಲ್ ಪ್ರಕಾರ ಮನೆಗಳನ್ನು ಕೊಟ್ಟಿಲ್ಲ, ಪ್ರಾಂತ್ಯವಾರು ಶಿಕ್ಷಕರ ನಿಯೋಜನೆ ಆಗಿಲ್ಲ, ಎಲ್ಲೋ ಇರೋರನ್ನು ಇನ್ನೆಲ್ಲೋ ಸಮೀಕ್ಷೆಗೆ ಹಾಕಿದ್ದಾರೆ. ಪೂರ್ವ ತಯಾರಿ ಮಾಡಿಕೊಳ್ಳದೇ ಸಮೀಕ್ಷೆ ನಡೆಯುತ್ತಿದೆ. ಇದರಿಂದ ಒಂದೊಂದು ಸಮೀಕ್ಷೆ ಪ್ರತಿ ಭರ್ತಿಗೆ 1.5 ರಿಂದ 2 ಗಂಟೆ ಬೇಕು. ಎಲ್ಲರಿಗೂ ತಾಂತ್ರಿಕ ಜ್ಞಾನ ಇರಲ್ಲ, ಇದನ್ನು ಸರ್ಕಾರ ಗಮನಿಸಬೇಕಿತ್ತು ಎಂದು ಸರ್ಕಾರಕ್ಕೆ ಸರಿಯಾದ ಉತ್ತರ ನೀಡಿದ್ದಾರೆ.