Saturday, September 27, 2025

ರಾಜ್ಯದಲ್ಲಿ ಮತ್ತೆ ಮಳೆಯಾರ್ಭಟ, ಈ ಎಂಟು ಜಿಲ್ಲೆಗಳಲ್ಲಿ Yellow alert

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕರ್ನಾಟಕದಲ್ಲಿ ಮತ್ತೆ ಚುರುಕಾಗಿದ್ದು, ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದೆ. ರಾಜ್ಯದ ಬರೋಬ್ಬರಿ 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯಾದ್ಯಂತ ಮುಂದಿನ 5 ದಿನಗಳ ವರೆಗೆ ಅಂದರೆ ಅಕ್ಟೋಬರ್ 2ರವರೆಗೂ ಮಳೆ ಮುಂದುವರೆಯಲಿದೆ. ಪ್ರಮುಖವಾಗಿ ಇಂದಿನಿಂದ ಎರಡು ದಿನಗಳ ಕಾಲ ಉತ್ತರ ಕರ್ನಾಟಕದಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲೂ ಅಕ್ಟೋಬರ್ 1ರಿಂದ ಮಳೆ ಚುರುಕಾಗಲಿದ್ದು, ದಕ್ಷಿಣ ಒಳನಾಡಿನ ಸಾಕಷ್ಟು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.