ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನ ಕರೂರಿನಲ್ಲಿ ಟಿವಿಕೆ ನಾಯಕ ವಿಜಯ್ ಅವರ ಪ್ರಚಾರ ರ್ಯಾಲಿಯ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದಿಂದ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ.
ಈ ನಡುವೆ ಸಂತಾಪ ವ್ತಕ್ತಪಡಿಸಿರುವ ತಮಿಳುನಾಡು ಸಿಎಂ ಸ್ಟಾಲಿನ್, ನಾಳೆ ಕರೂರುಗೆ ತೆರಳಲಿದ್ದು, ಗಾಯಾಳುಗಳನ್ನು ನೇರವಾಗಿ ಭೇಟಿಯಾಗಲಿದ್ದಾರೆ. ಏತನ್ಮಧ್ಯೆ, ಸಾವಿನ ಸಂಖ್ಯೆಯೂ ಹೆಚ್ಚಾಗಬಹುದು ಎನ್ನಲಾಗಿದೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಕರೂರು ಘಟನೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡು ಪ್ರಜ್ಞಾಹೀನರಾಗಿ ಆಸ್ಪತ್ರೆಗೆ ದಾಖಲಾಗಿರುವವರಿಗೆ ತಕ್ಷಣದ ಮತ್ತು ಉನ್ನತ ಮಟ್ಟದ ವೈದ್ಯಕೀಯ ಚಿಕಿತ್ಸೆ ನೀಡಲು ಅವರು ಸಂಬಂಧಪಟ್ಟವರಿಗೆ ಸೂಚನೆ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಮಾಜಿ ಸಚಿವ ವಿ. ಸೆಂಥಿಲ್‌ಬಾಲಾಜಿ, ಆರೋಗ್ಯ ಸಚಿವ ಮಾ. ಸುಬ್ರಮಣಿಯನ್ ಮತ್ತು ಜಿಲ್ಲಾಧಿಕಾರಿಗಳಿಗೆ ಕೂಡಲೇ ಚಿಕಿತ್ಸಾ ವ್ಯವಸ್ಥೆಗಳನ್ನು ಖಚಿತಪಡಿಸಿಕೊಳ್ಳಲು ನಿರ್ದೇಶನ ನೀಡಿರುವುದಾಗಿ ತಿಳಿಸಿದ್ದಾರೆ.