ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮತ್ತೆ ಮಳೆ ಹೆಚ್ಚುತ್ತಿದ್ದು, ಹವಾಮಾನ ಇಲಾಖೆ ಮುನ್ಸೂಚನೆಯಂತೆ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಿಗೆ ಎಚ್ಚರಿಕೆ ಸೂಚನೆ ನೀಡಲಾಗಿದೆ.
ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಕೊಪ್ಪಳ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್. ಜೊತೆಗೆ ಸೆಪ್ಟೆಂಬರ್ 29ರಂದು ಬಾಗಲಕೋಟೆ, ಬೆಳಗಾವಿ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ.
ವರದಿ ಪ್ರಕಾರ, ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆಯಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಮತ್ತು ಕನಿಷ್ಠ 19 ಡಿಗ್ರಿ ದಾಖಲಾಗಲಿದೆ. ಮಂಗಳೂರಿನಲ್ಲಿ 28-24, ಶಿವಮೊಗ್ಗದಲ್ಲಿ 26-21, ಬೆಳಗಾವಿಯಲ್ಲಿ 26-20 ಮತ್ತು ಮೈಸೂರಿನಲ್ಲಿ 28-22 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಸಾಧ್ಯತೆ ಇದೆ.
ರಾಜ್ಯದಾದ್ಯಂತ ಮಳೆಯ ತೀವ್ರತೆ ಹೆಚ್ಚುವ ನಿರೀಕ್ಷೆಯ ಹಿನ್ನೆಲೆಯಲ್ಲಿ ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಇಲಾಖೆಯು ಸೂಚಿಸಿದೆ.