ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಎಡೇಗೌಡನಹಳ್ಳಿ ಬಳಿ ಶನಿವಾರ ರಾತ್ರಿ KSRTC ಬಸ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದ ಮೂವರು ಯುವಕರು ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಇರ್ಫಾನ್ (25), ತರುಣ್ (26) ಮತ್ತು ರೇವಂತ್ (27) ಎಂದು ಗುರುತಿಸಲಾಗಿದ್ದು, ಹಳ್ಳಿಮೈಸೂರು ಠಾಣಾ ವ್ಯಾಪ್ತಿಯ ಹೇಮಾವತಿ ಬಡಾವಣೆಯ ನಿವಾಸಿಗಳಾಗಿದ್ದಾರೆ.
ಹಾಸನದಿಂದ ಮೈಸೂರು ಕಡೆಗೆ ಹೊರಟಿದ್ದ KSRTC ಬಸ್ ಹಾಗೂ ಮೈಸೂರು ಕಡೆಗೆ ಬರುತ್ತಿದ್ದ ಒಂದೇ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ. ಸ್ಥಳದಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದು, ಉಳಿದ ಇಬ್ಬರು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.