Sunday, September 28, 2025

ಕರೂರ್ ರ‍್ಯಾಲಿ ಕಾಲ್ತುಳಿತ: ನ್ಯಾಯಾಧೀಶೆ ಅರುಣಾ ಜಗದೀಶನ್ ನೇತೃತ್ವದಲ್ಲಿ ತನಿಖಾ ಆಯೋಗ ರೆಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡಿನ ಕರೂರಿನಲ್ಲಿ ಟಿವಿಕೆ ಮುಖ್ಯಸ್ಥ ಮತ್ತು ನಟ ವಿಜಯ್ ನೇತೃತ್ವದ ವಿಜಯ್ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 39 ಜನರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ, ನಿವೃತ್ತ ನ್ಯಾಯಾಧೀಶೆ ಅರುಣಾ ಜಗದೀಶನ್ ಅವರ ನೇತೃತ್ವದಲ್ಲಿ ತನಿಖಾ ಆಯೋಗವನ್ನು ತಮಿಳುನಾಡು ಸರ್ಕಾರ ರಚಿಸಿದೆ. ಸರಕಾರದ ಆದೇಶ ನಂತರ ಆಯೋಗ ಕಾರ್ಯಾಚರಣೆಯನ್ನು ತಕ್ಷಣ ಪ್ರಾರಂಭಿಸುವಂತೆ ಸೂಚಿಸಲಾಗಿದೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಮಾಜಿ ಸಚಿವ ಸೆಂಥಿಲ್ ಬಾಲಾಜಿ ಮತ್ತು ಆರೋಗ್ಯ ಸಚಿವ ಮಾ. ಸುಬ್ರಮಣಿಯಂ ದುರಂತದ ಸ್ಥಳದಲ್ಲಿ ರಕ್ಷಣಾ ಕಾರ್ಯಗಳ ಮೇಲ್ವಿಚಾರಣೆ ನಡೆಸುವಂತೆ ನಿರ್ದೇಶನ ಪಡೆದಿದ್ದಾರೆ. ಸಿಎಂ ನಿರ್ದೇಶನದಂತೆ, ಯುದ್ಧೋಪಾದಿ ಅಗತ್ಯ ನೆರವು ನೀಡುವಂತೆ ಸಚಿವ ಅನ್ಬಿಲ್ ಮಹೇಶ್ ನೋಡಿಕೊಳ್ಳುತ್ತಿದ್ದಾರೆ. ಘಟನಾ ಸ್ಥಳದಲ್ಲಿ ಬೆಳಿಗ್ಗೆ 7 ಗಂಟೆಯಿಂದಲೇ 30,000–35,000 ಜನರು ಇದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಾಮಕ್ಕಲ್‌ನಿಂದ ಸುಮಾರು 5,000 ಪಕ್ಷದ ಕಾರ್ಯಕರ್ತರು ರ‍್ಯಾಲಿಯನ್ನು ಬೆಂಬಲಿಸಲು ಬಂದಿದ್ದು, ಜನಸಂದಣಿ ತೀವ್ರತೆಯನ್ನು ಹೆಚ್ಚಿಸಿದೆ.

ಅರುಣಾ ಜಗದೀಶನ್ ಅವರು 2015 ರಲ್ಲಿ ಮದ್ರಾಸ್ ಹೈಕೋರ್ಟ್‌ನ ನ್ಯಾಯಾಧೀಶೆ ಹುದ್ದೆಯಿಂದ ನಿವೃತ್ತರಾದ ಬಳಿಕ, 2018 ರ ತೂತುಕುಡಿ ಪ್ರತಿಭಟನಾ ಘಟನೆಗೆ ಸಂಬಂಧಿಸಿದ ತನಿಖೆಯನ್ನೂ ನಡೆಸಿದ್ದರು. ಆ ಸಮಯದಲ್ಲಿ 14 ಮಂದಿ ಸಾವನ್ನಪ್ಪಿದ್ದು, ಆಯೋಗವು ಸ್ಥಳೀಯ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಶಿಫಾರಸು ಮಾಡಿತ್ತು.