ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಭೇಟಿಯಾಗಿದ್ದಾರೆ.
ದೆಹಲಿಯಲ್ಲಿರುವ ಉಪರಾಷ್ಟ್ರಪತಿಗಳ ನಿವಾಸಕ್ಕೆ ತೆರಳಿ ರಾಧಾಕೃಷ್ಣನ್ ಅವರನ್ನು ಪ್ರಧಾನಿಗಳು ಭೇಟಿ ಮಾಡಿದ್ದಾರೆ.
‘ಉಪರಾಷ್ಟ್ರಪತಿ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿದೆ. ಹಲವಾರು ವಿಷಯಗಳ ಬಗ್ಗೆ ಅವರೊಂದಿಗೆ ಕೂಲಂಕಷ ಚರ್ಚೆ ನಡೆಸಿದೆ’ ಎಂದು ನರೇಂದ್ರ ಮೋದಿ ಹೇಳಿದ್ದಾರೆ.
ತಮಿಳುನಾಡಿನ ಹಿರಿಯ ಬಿಜೆಪಿ ಮುಖಂಡರಾದ ಸಿ.ಪಿ. ರಾಧಾಕೃಷ್ಣನ್ ಕೆಲ ವಾರಗಳ ಹಿಂದಷ್ಟೇ ಉಪರಾಷ್ಟ್ರಪತಿಗಳಾಗಿ ಪ್ರಮಾಣ ಸ್ವೀಕರಿಸಿದ್ದಾರೆ.