ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಹಲವು ಭಾಗಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆಯಿದ್ದು, ಬಾಗಲಕೋಟೆ, ಬೆಳಗಾವಿ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಕರ್ನಾಟಕದ ಹಲವೆಡೆ ಸಹ ಮಳೆಯ ಅಲೆ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ. ಮಡಿಕೇರಿಯಲ್ಲಿ ತಾಪಮಾನ ಇನ್ನಷ್ಟು ಕಡಿಮೆ ಆಗಿ ಗರಿಷ್ಠ 24 ಮತ್ತು ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಲುಪಲಿದೆ.
ರಾಜ್ಯದಾದ್ಯಂತ ಮಳೆ ಚುರುಕುಗೊಂಡಿರುವುದರಿಂದ ಜನರು ಎಚ್ಚರಿಕೆಯಿಂದ ಇರಬೇಕೆಂದು ಹವಾಮಾನ ಇಲಾಖೆ ಸೂಚಿಸಿದೆ. ಪ್ರವಾಸ ಅಥವಾ ಹೊರಗೆ ಹೋಗುವವರು ಹವಾಮಾನ ಎಚ್ಚರಿಕೆಗಳನ್ನು ಮನಗಂಡು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಉತ್ತಮ. ಮುಂದಿನ ಎರಡು ದಿನಗಳವರೆಗೆ ಮಳೆಯ ತೀವ್ರತೆ ಮುಂದುವರಿಯುವ ಸಾಧ್ಯತೆಯಿದೆ.