ಹೊಸದಿಗಂತ ಡಿಜಿಟಲ್ ಡೆಸ್ಕ್:
ಭೀಮಾನದಿ ಪ್ರವಾಹಕ್ಕೆ ಯಾದಗಿರಿ ನಗರ ಸೇರಿದಂತೆ ನದಿ ಪಾತ್ರದ ಗ್ರಾಮಗಳ ಜನರು ತತ್ತರಿಸಿಹೋಗಿದ್ದಾರೆ.
ನೀರಿನ ಪ್ರಮಾಣ ಹೆಚ್ಚಾಗಿದ್ದು, ಬಡಾವಣೆಗಳಿಗೆ ರಾತ್ರಿ ನೀರು ನುಗ್ಗಿದ್ದು ನಿವಾಸಿಗಳಿಗೆ ಜಲಕಂಟಕ ಎದುರಾಗಿದೆ. ಮನೆಯಲ್ಲಿ ಸಿಲುಕಿದ ಜನರನ್ನ SDRF ಹಾಗೂ ಅಗ್ನಿಶಾಮಕ ದಳ 20ಕ್ಕೂ ಹೆಚ್ಚು ಜನರನ್ನ ಬೋಟ್ ಮೂಲಕ ರಕ್ಷಣೆ ಮಾಡಿದೆ.
ಭೀಮಾ ನದಿ ಪ್ರವಾಹಕ್ಕೆ ಯಾದಗಿರಿಯಲ್ಲಿ ರಸ್ತೆ ಸಂಪರ್ಕಗಳು ಕಡಿತವಾಗಿದ್ದು, ನಾಯ್ಕಲ್ ಗ್ರಾಮದ ರಾಜ್ಯ ಹೆದ್ದಾರಿ ಜಲಾವೃತವಾಗಿದೆ. ತುಂಬಿಹರಿಯುತ್ತಿರುವ ನದಿಯ ಸೇತುವೆ ಮೇಲೆಯೇ ವಾಹನ ಸವಾರರು ಹರಸಾಹಸ ನಡೆಸಿದ್ದಾರೆ. ವಡಗೇರಾ ತಾಲೂಕಿನ ಬೆನಕನ ಹಳ್ಳಿ ಗ್ರಾಮಕ್ಕೆ ಸಂಪರ್ಕ ಕಡಿತವಾಗಿದ್ದು ಅಧಿಕಾರಿಗಳು ಜನಪ್ರತಿನಿಧಿಗಳು ಸ್ಪಂದಿಸುತ್ತಿಲ್ಲ ಅಂತ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.