ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರೂರುನಲ್ಲಿ ರ‍್ಯಾಲಿ ಸಮಯದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ ಮೃತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ಕರೂರು ಸರ್ಕಾರಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಶಾರದಾ ಮೃತಪಟ್ಟಿದ್ದಾರೆ.
ಸ್ಥಳೀಯ ಪೊಲೀಸರು ಕಾಲ್ತುಳಿತದ ಸ್ಥಳದಲ್ಲಿರುವ ಎಲ್ಲಾ ಸಿಸಿಟಿವಿ, ಡ್ರೋನ್ ಮತ್ತು ಮೊಬೈಲ್‌ನಲ್ಲಿ ದಾಖಲಾಗಿರುವ ದೃಶ್ಯಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಾಥಮಿಕ ತನಿಖೆಯು ಈಗಾಗಲೇ ಪ್ರಾರಂಭವಾಗಿದೆ.