January16, 2026
Friday, January 16, 2026
spot_img

ಸಿಸಿಬಿ ಪೊಲೀಸರ ಭರ್ಜರಿ ಬೇಟೆ: 7.8 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಸಿಬಿ ಪೊಲೀಸರು ಸಿಲಿಕಾನ್ ಸಿಟಿಯಲ್ಲಿ ನಡೆಸಿದ ಕಾರ್ಯಾಚರಣೆ ವೇಳೆ ಬರೋಬ್ಬರಿ 7.80 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ನೈಜೀರಿಯಾ ಮೂಲದ ಕೆವಿನ್ ರೋಜರ್ ಮತ್ತು ಥಾಮಸ್ ನವೀದ್ ಚೀಮ್ ಎಂದು ಗುರುತಿಸಲಾಗಿದೆ.

ಮಾಹಿತಿ ಪ್ರಕಾರ ದೆಹಲಿ ಮತ್ತು ಮುಂಬಯಿಯಿಂದ ಡ್ರಗ್ಸ್ಗಳನ್ನು ನಗರಕ್ಕೆ ತರಿಸಿಕೊಳ್ಳುತ್ತಿದ್ದರು ಎನ್ನಲಾಗಿದೆ. ಪ್ರಕರಣ ಸಂಬಂಧ ಸಿಸಿಬಿ ಮತ್ತು ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಬಂಧಿತರಿಂದ 3.8 ಕೆಜಿ ಎಂಡಿಎಂಎ ಕ್ರಿಸ್ಟಲ್, ಎಂಡಿಎಂಎ ಬ್ರೌನ್ ಹಾಗೂ ವೈಟ್ ಡ್ರಗ್ಸ್, 42 ಗ್ರಾಂ ತೂಕದ 82 ಎಕ್ಸಟೆಸಿ ಮಾತ್ರೆಗಳು, 23 ಕೆಜಿ ಗಾಂಜಾ ಮತ್ತು 482 ಗ್ರಾಂ ಹೈಡ್ರೋ ಗಾಂಜಾ ವಶಕ್ಕೆ ಪಡೆಯಲಾಗಿದೆ.

ಹೆಬ್ಬಗೋಡಿಯಲ್ಲಿ ಮನೆ ಮಾಡಿದ್ದ ಆರೋಪಿಗಳು, ಪರಿಚಿತ ಸ್ಥಳಗಳಲ್ಲಿ ಡ್ರಗ್ಸ್ ಪಾರ್ಸೆಲ್ ಇಟ್ಟು ಲೊಕೇಶನ್ ಶೇರ್ ಮೂಲಕ ವ್ಯವಹಾರ ನಡೆಸುತ್ತಿದ್ದರು. ಹಣವನ್ನು ಆನ್‌ಲೈನ್ ಮೂಲಕ ಸ್ವೀಕರಿಸುತ್ತಿದ್ದರು. ಟೆಕ್ಕಿಗಳು ಮತ್ತು ವಿದ್ಯಾರ್ಥಿಗಳು ಇವರ ಪ್ರಮುಖ ಟಾರ್ಗೆಟ್ ಆಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Must Read

error: Content is protected !!