Monday, November 17, 2025

ಜಾತಿ ಧರ್ಮಗಳಿಗೆ ಸೀಮಿತ ಅಲ್ಲ, 7 ಕೋಟಿ ಜನರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಯಾವುದೇ ಜಾತಿ ಧರ್ಮಗಳಿಗೆ ಸೀಮಿತ ಅಲ್ಲ ರಾಜ್ಯದ 7 ಕೋಟಿ ಜನರ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಲ್ಲಿ ಮಾತನಾಡಿದ ಅವರು, ಜಾತಿ ಗಣತಿಯನ್ನು ವಿರೋಧಿಸಿದ ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ಇದೀಗ ತಿರುಗೇಟು ನೀಡಿದ್ದಾರೆ. ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಸಮೀಕ್ಷೆ ಆಗಿದ್ದು, ಯಾವುದೇ ಒಂದು ಜಾತಿ ಧರ್ಮಗಳಿಗೆ ಇದು ಸೀಮಿತ ಅಲ್ಲ, 7 ಕೋಟಿ ಜನರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯಾಗಿದೆ. ಇದು ಯಾರ ವಿರುದ್ಧವಾದ ಸಮೀಕ್ಷೆ ಅಲ್ಲವೇ ಅಲ್ಲ ಇದು ಎಲ್ಲರ ಪರವಾಗಿರುವ ಸಮೀಕ್ಷೆ ಎಂದು ತಿಳಿಸಿದ್ದಾರೆ.

error: Content is protected !!