January18, 2026
Sunday, January 18, 2026
spot_img

ಪಾಕ್‌ ಸರ್ಕಾರದ ವಿರುದ್ಧ ಪಿಓಕೆಯಲ್ಲಿ ಭಾರೀ ಪ್ರತಿಭಟನೆ,ಇಂಟರ್ನೆಟ್ ಸ್ಥಗಿತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ವಾಮಿ ಕ್ರಿಯಾ ಸಮಿತಿ ಸೋಮವಾರ ವ್ಯಾಪಕ ಪ್ರತಿಭಟನೆ ಹಮ್ಮಿಕೊಂಡಿದ್ದು, ಇದು ಇಲ್ಲಿನ ಇತಿಹಾಸದಲ್ಲೇ ಅತೀ ದೊಡ್ಡ ಪ್ರತಿಭಟನೆಗಳಲ್ಲಿ ಎಂದು ಗುರುತಿಸಲಾಗಿದೆ.

ಪ್ರಧಾನಿ ಶೆಹಬಾಜ್ ಷರೀಫ್ ಸರ್ಕಾರದ ವಿರುದ್ಧ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಅನಿರ್ದಿಷ್ಟಾವಧಿಗೆ ಮುಷ್ಕರಕ್ಕೆ ಕರೆ ನೀಡಲಾಗಿದ್ದು ಸಾವಿರಾರು ಜನರು ಬೀದಿಗಿಳಿದಿದ್ದಾರೆ. ಅಂಗಡಿಗಳನ್ನು ಮುಚ್ಚಿ, ರಸ್ತೆಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಹೆಚ್ಚಿಸಿದೆ.

ಈ ಪ್ರದೇಶದಲ್ಲಿ ಇಸ್ಲಾಮಾಬಾದ್ ಅಪಾರ ಪ್ರಮಾಣದಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಿದೆ. ಮಧ್ಯರಾತ್ರಿಯಿಂದ ಇಂಟರ್ನೆಟ್ ಸಂಪರ್ಕವನ್ನು ಕಡಿತಗೊಳಿಸಿದೆ.

ಇತ್ತೀಚೆಗೆ ಹೆಚ್ಚಿನ ಜನರನ್ನು ಆಕರ್ಷಿಸುತ್ತಿರುವ ನಾಗರಿಕ ಸಮಾಜದ ಒಕ್ಕೂಟವಾದ ಅವಾಮಿ ಕ್ರಿಯಾ ಸಮಿತಿಯು ಪಾಕ್ ಆಕ್ರಮಿತ ಕಾಶ್ಮೀರದ ಭಾಗವು ರಾಜಕೀಯ, ಆರ್ಥಿಕ ನಿರ್ಲಕ್ಷ್ಯಕ್ಕೆ ಒಳಗಾಗಿದೆ ಎಂದು ಆರೋಪಿಸಿ ಸಾವಿರಾರು ಜನರನ್ನು ಒಗ್ಗೂಡಿಸಿದೆ. ಪಾಕಿಸ್ತಾನದಲ್ಲಿ ವಾಸಿಸುವ ಕಾಶ್ಮೀರಿ ನಿರಾಶ್ರಿತರಿಗೆ ಮೀಸಲಾಗಿರುವ ಪಿಒಕೆ ಅಸೆಂಬ್ಲಿಯಲ್ಲಿ 12 ಶಾಸಕಾಂಗ ಸ್ಥಾನಗಳನ್ನು ರದ್ದುಗೊಳಿಸುವುದು ಸೇರಿದಂತೆ ಇದು ಇಲ್ಲಿ ಪ್ರಮುಖ 38 ಸುಧಾರಣೆಗಳಿಗೆ ಒತ್ತಾಯಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಅವಾಮಿ ಕ್ರಿಯಾ ಸಮಿತಿಯ ಪ್ರಮುಖ ನಾಯಕ ಶೌಕತ್ ನವಾಜ್ ಮಿರ್, ನಮ್ಮ ಅಭಿಯಾನ ಯಾವುದೇ ಸಂಸ್ಥೆಯ ವಿರುದ್ಧವಲ್ಲ. 70 ವರ್ಷಗಳಿಗೂ ಹೆಚ್ಚು ಕಾಲ ನಮ್ಮ ಜನರಿಗೆ ನಿರಾಕರಿಸಲಾದ ಮೂಲಭೂತ ಹಕ್ಕುಗಳಿಗಾಗಿ ಎಂದು ಹೇಳಿದ್ದಾರೆ.

ಪ್ರತಿಭಟನೆ ತೀವ್ರಗೊಂಡ ಬಳಿಕ ಪ್ರತಿಭಟನಾಕಾರರೊಂದಿಗೆ ಮಾತುಕತೆಗಳು ವಿಫಲವಾಗಿದ್ದು ಅಧಿಕಾರಿಗಳು ಬಲಪ್ರದರ್ಶನಕ್ಕೆ ಮುಂದಾಗಿದ್ದಾರೆ. ಶಸ್ತ್ರಸಜ್ಜಿತ ಪಡೆಗಳು ಪಿಒಕೆ ಪಟ್ಟಣಗಳಲ್ಲಿ ಧ್ವಜ ಮೆರವಣಿಗೆಗಳನ್ನು ನಡೆಸಿತು. ಪಂಜಾಬ್‌ನಿಂದ ಸಾವಿರಾರು ಸೈನಿಕರನ್ನು ಸ್ಥಳಕ್ಕೆ ಕರೆಸಲಾಗಿದೆ. ಪ್ರಮುಖ ನಗರಗಳ ಪ್ರವೇಶ ಮತ್ತು ನಿರ್ಗಮನ ಸ್ಥಳಗಳನ್ನು ಮುಚ್ಚಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಕಣ್ಗಾವಲು ಹೆಚ್ಚಿಸಲಾಗಿದೆ.

ಸ್ಥಳೀಯ ಭದ್ರತಾ ಪಡೆಗಳನ್ನು ಬಲಪಡಿಸಲು ಇಸ್ಲಾಮಾಬಾದ್ ನಿಂದ ಹೆಚ್ಚುವರಿಯಾಗಿ 1,000 ಪೊಲೀಸ್ ಸಿಬ್ಬಂದಿಯನ್ನು ಕಳುಹಿಸಲಾಗಿದೆ. ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಈ ಕ್ರಮ ಅಗತ್ಯ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಮುದಸ್ಸರ್ ಫಾರೂಕ್ ತಿಳಿಸಿದ್ದಾರೆ.

Must Read

error: Content is protected !!