ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಕನ್ನಡ ಜಿಲ್ಲೆಯಲ್ಲಿ ನಕಲಿ ವೈದ್ಯರ ಪತ್ತೆ ಕುರಿತಂತೆ ನಿರಂತರವಾಗಿ ಕಾರ್ಯಾಚರಣೆ ನಡೆಸುವಂತೆ ಮತ್ತು ಪತ್ತೆಯಾದ ನಕಲಿ ವೈದ್ಯರ ವಿರುದ್ದ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲು ಮಾಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಉತ್ತರಕನ್ನಡ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯ ಸೂಚನೆ ನೀಡಿದ್ದಾರೆ.
ಕಾರವಾರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಕೆ.ಪಿ.ಎಂ.ಇ ಜಿಲ್ಲಾ ನೊಂದಣಿ ಮತ್ತು ಕುಂದುಕೊರತೆ ನಿವಾರಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಕಲಿ ವೈದ್ಯರು ಚಿಕಿತ್ಸೆ ನೀಡುವುದು ಹಾಗೂ ಕ್ಲಿನಿಕ್ ನಡೆಸುವುದು ತುಂಬಾ ಅಪಾಯಕಾರಿಯಾಗಿದ್ದು ಇದನ್ನು ಅತ್ಯಂತ ಗಂಭಿರವಾಗಿ ಪರಿಗಣಿಸಲಾಗಿದೆ ಎಂದು ತಿಳಿಸಿದ್ದಾರೆ.
ಸೂಕ್ತ ಅನುಮತಿ ಇಲ್ಲದೇ ಕ್ಲಿನಿಕ್ ಗಳನ್ನು ತೆರೆದಲ್ಲಿ ಕೆ.ಪಿ.ಎಮ್.ಇ ಕಾಯ್ದೆಯಡಿಯಲ್ಲಿ 1 ಲಕ್ಷದವರೆಗೆ ದಂಡದೊಂದಿಗೆ 3 ವರ್ಷ ಕಾರಾಗೃಹ ಶಿಕ್ಷೆ ವಿಧಿಸಲಾಗುವುದು. ನಕಲಿ ವೈದ್ಯರಿಗೆ ಬಾಡಿಗೆ ನೀಡಿದ ಕಟ್ಟಡದ ಆವರಣವನ್ನೂ ಕೂಡ ಕೆ.ಪಿ.ಎಮ್.ಇ ಕಾಯ್ದೆಯಡಿಯಲ್ಲಿ ಸೀಲ್ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ನಕಲಿ ವೈದ್ಯರಿಗೆ ಬಲೆ: ಕಾರ್ಯಾಚರಣೆ ಚುರುಕುಗೊಳಿಸಲು ಜಿಲ್ಲಾಧಿಕಾರಿ ಸೂಚನೆ
