ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರವಾಹದಿಂದ ಜನರು ತತ್ತರಿಸುವಂತಾಗಿದೆ. ರಾಜ್ಯ ಸರ್ಕಾರ ತಕ್ಷಣ 3 ಸಾವಿರ ಕೋಟಿ ರೂಪಾಯಿ ಪರಿಹಾರ ಘೋಷಿಸಿಸುವಂತೆ ಪ್ರತಿಪಕ್ಷ ನಾಯಕ ಆರ್. ಅಶೋಕ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಲಬುರ್ಗಿ ಹಾಗೂ ಬೀದರ್‌ನಲ್ಲಿ ಹೆಚ್ಚು ಹಾನಿ ಉಂಟಾಗಿದೆ. ಸರ್ಕಾರದ ಬಳಿ ಹಣವಿಲ್ಲದೆ ಪರಿಹಾರ ನೀಡಲು ಮೀನಾಮೇಶ ಎಣಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಕೇಂದ್ರ ಸರ್ಕಾರ ತನ್ನ ಪಾಲಿನ ಪರಿಹಾರದ ಹಣ ನೀಡಲಿದೆ. ರಾಜ್ಯ ಸರ್ಕಾರ ತಕ್ಷಣ ೩ ಸಾವಿರ ಕೋಟಿ ರೂಪಾಯಿ ಪರಿಹಾರ ಘೋಷಿಸುವಂತೆ ಎಂದು ಆಗ್ರಹಿಸಿದ್ದಾರೆ. ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಬೀದರ್ ದಕ್ಷಿಣ ಹಾಗೂ ಬೀದರ್ ವಿಧಾನಸಭಾ ಕ್ಷೇತ್ರಗಳ ಮಳೆ ಹಾನಿಗೊಳಗಾದ ವಿವಿಧ ಭಾಗಗಳ ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಹಾನಿ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಅವರು ಸರ್ಕಾರ ಶೀಘ್ರ ಪರಿಹಾರ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.
ಪ್ರವಾಹ ಸಂತ್ರಸ್ಥ ಜಿಲ್ಲೆಗಳಿಗೆ 3 ಸಾವಿರ ಕೋಟಿ ರೂಪಾಯಿ ಪರಿಹಾರ: ಸರ್ಕಾರಕ್ಕೆ ಬಿಜೆಪಿ ಆಗ್ರಹ
