ಹೊಸದಿಗಂತ ಡಿಜಿಟಲ್ ಡೆಸ್ಕ್:
ಚನ್ನಪಟ್ಟಣ ತಾಲ್ಲೂಕಿನ ಅಂಬಾಡಹಳ್ಳಿಯ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಶಾಂತಮ್ಮ ಸಾಮಾಜಿಕ ಮತ್ತು ಶೈಕ್ಷಣಿಕ ಕಾರ್ಯವನ್ನು ಕೇವಲ 7 ದಿನಗಳಲ್ಲಿಯೇ ಪೂರ್ಣಗೊಳಿಸಿ ಶೇಕಡಾ 100ರಷ್ಟು ಸಾಧನೆ ಮಾಡಿದ್ದಾರೆ.
ರಾಮನಗರ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಶಾಂತಮ್ಮ ಅವರಿಗೆ ನಗದು ಬಹುಮಾನ ನೀಡಿ ಅವರ ಕಾರ್ಯವನ್ನು ಪ್ರಶಂಸಿಸಿದ್ದಾರೆ. ಸಮೀಕ್ಷೆಯಲ್ಲಿ ನೀವು ತೋರಿದ ಆಸಕ್ತಿ, ಉತ್ಸಾಹ ಮತ್ತು ಪ್ರಾಮಾಣಿಕ ಪ್ರಯತ್ನವು ಸಮೀಕ್ಷಾ ಕಾರ್ಯ ತ್ವರಿತವಾಗಿ ಸಾಗಲು ಸಹಕಾರಿಯಾಗಿದೆ ಎಂದು ಈ ಸಂದರ್ಭ ಜಿಲ್ಲಾಧಿಕಾರಿ ಹೇಳಿದ್ದಾರೆ.
ಏಳೇ ದಿನದಲ್ಲಿ 100% ಸಮೀಕ್ಷಾ ಕಾರ್ಯ: ಶಿಕ್ಷಕಿ ಶಾಂತಮ್ಮಗೆ ಸಿಕ್ಕಿತು ಜಿಲ್ಲಾಧಿಕಾರಿಯಿಂದ ಅಭಿನಂದನೆ!
