ಹೊಸದಿಗಂತ ಡಿಜಿಟಲ್ ಡೆಸ್ಕ್:
ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತದ ಗೆಲುವಿಗೆ ಎಲ್ಲೆಡೆಯಿಂದ ಅಭಿನಂದನೆಗಳು ಹರಿದುಬರುತ್ತಿದೆ. ಆದ್ರೆ ಕ್ರಿಕೆಟ್ ನಲ್ಲಿ ಗೆದ್ದಿರುವ ಭಾರತ ತಂಡವನ್ನು ಅಭಿನಂದಿಸಿಲ್ಲ ಎಂದು ಬಿಜೆಪಿ ಹೇಳಿದೆ.
ಪಾಕಿಸ್ತಾನ ಸೋತಿದ್ದರಿಂದ ಕಾಂಗ್ರೆಸ್ ನಾಯಕರಿಗೆ ಹೆಚ್ಚಿನ ನೋವಾಗಿರುವಂತೆ ಕಾಣುತ್ತಿದ್ದಾರೆ. ‘ಆಪರೇಷನ್ ಸಿಂದೂರ್’ ಭೀಕರ ದಾಳಿಗೆ ಭಾರತೀಯ ಸೇನೆಯನ್ನು ಕಾಂಗ್ರೆಸ್ ಅಭಿನಂದಿಸಿರಲಿಲ್ಲ. ಈಗ ಕ್ರಿಕೆಟ್ ನಲ್ಲಿ ಗೆದ್ದಿರುವ ಭಾರತ ತಂಡವನ್ನು ಅಭಿನಂದಿಸಿಲ್ಲ ಎಂದು ಬಿಜೆಪಿ ಹೇಳಿದೆ.
ಟೂರ್ನಿಯಲ್ಲಿ ಮೂರು ಬಾರಿ ಪಾಕಿಸ್ತಾನವನ್ನು ಸೋಲಿಸಿ ಏಷ್ಯಾಕಪ್ ತಂದ ನಮ್ಮ ರಾಷ್ಟ್ರೀಯ ತಂಡವನ್ನು ಅಭಿನಂದಿಸಿ ಯಾವುದೇ ಕಾಂಗ್ರೆಸ್ ನಾಯಕರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿಲ್ಲ ಎಂದು ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಏಷ್ಯಾಕಪ್ ಫೈನಲ್‌ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಅದ್ಭುತ ಗೆಲುವು ಸಾಧಿಸಿರುವುದು ರಾಹುಲ್ ಗಾಂಧಿ ಮತ್ತು ಇಡೀ ಕಾಂಗ್ರೆಸ್ ನ್ನು ಕೋಮಸ್ಥಿತಿಗೆ ತಳ್ಳಿದೆ ಎಂದು ಅವರು ಹೇಳಿದ್ದಾರೆ.
“ಆಪರೇಷನ್ ಸಿಂದೂರ್ ನಂತರ, ಭಾರತೀಯ ಸೇನೆಗೆ ಅಭಿನಂದನೆ ಸಲ್ಲಿಸದಂತೆ, ಈಗ ಅವರು ಭಾರತ ತಂಡದ ವಿಜಯೋತ್ಸವ ಆಚರಿಸಲು ಮೊಹ್ಸಿನ್ ನಖ್ವಿ ಮತ್ತು ಪಾಕಿಸ್ತಾನದಲ್ಲಿರುವ ಅವರ ಇತರ ಹ್ಯಾಂಡ್ಲರ್‌ಗಳ ಅನುಮತಿಗಾಗಿ ಕಾಯುತ್ತಿರುವಂತೆ ತೋರುತ್ತಿದೆ. ಮತ್ತೊಮ್ಮೆ, ಪಾಕಿಸ್ತಾನ, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಒಂದೇ ಕಡೆ ಇರುವಂತೆ ಕಂಡಬರುತ್ತಿದೆ ಎಂದು ಮಾಳವೀಯಾ ಬರೆದುಕೊಂಡಿದ್ದಾರೆ.
ಈ ಮಧ್ಯೆ ಫೈನಲ್ ಪಂದ್ಯವನ್ನು ಆಪರೇಷನ್ ಸಿಂದೂರಕ್ಕೆ ಹೋಲಿಸಿದ್ದ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಕ್ರಿಕೆಟ್ ಪಂದ್ಯವನ್ನು ಯುದ್ಧಭೂಮಿಗೆ ಹೋಲಿಸುವುದು ಸರಿಯಲ್ಲ ಎಂದಿದೆ.