July 10, 2026
Friday, July 10, 2026
spot_img

WEATHER | ರಾಜ್ಯದಲ್ಲಿ ಮಳೆ ಅಬ್ಬರ ಜೋರು: ಜುಲೈ 31ರವರೆಗೂ ಭಾರೀ ಮಳೆಯ ಮುನ್ಸೂಚನೆ

ಕರ್ನಾಟಕದ ಹಲವೆಡೆ ಮಳೆ ಅಬ್ಬರ ಮುಂದುವರಿದಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಹ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ ಜಿಲ್ಲೆಯಾದ್ಯಾಂತ ಇಂದು ಮತ್ತು ನಾಳೆ ರೆಡ್ ಅಲರ್ಟ್‌ ನೀಡಲಾಗಿದ್ದು, ಜುಲೈ 30ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಕರ್ನಾಟಕದಾದ್ಯಂತ ಜುಲೈ 31ರವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಮುಂದಿನ ಐದಾರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !