October 17, 2026
Saturday, October 17, 2026
spot_img

ಹೆಲ್ಮೆಟ್‌ ಇಲ್ಲದೆ ಗಾಡಿ ಓಡಿಸಬೇಡಿ! ಅಪಘಾತದಿಂದ ಯುವಕನ ಮೆದುಳು ನಿಷ್ಕ್ರಿಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸ್ಕೂಟರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಯುವಕನ ಮೆದುಳು ನಿಷ್ಕ್ರಿಯಗೊಂಡ ಘಟನೆ ಬೆಂಗಳೂರಿನ ವೆಸ್ಟ್ ಆಫ್ ಕಾರ್ಡ್ ರಸ್ತೆಯ ರಾಜಾಜಿ ನಗರ ಮೆಟ್ರೊ ನಿಲ್ದಾಣದ ಬಳಿ ಸಂಭವಿಸಿದೆ.

ಬೈಕ್ ಸವಾರ ವಿನಯ್ (23) ಮೆದುಳು ನಿಷ್ಕ್ರಿಯವಾಗಿದೆ. ಸ್ಕೂಟರ್ ಚಲಾಯಿಸುತ್ತಿದ್ದ ಸಿರಿ (22) ಎಂಬ ಯುವತಿ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬಸವೇಶ್ವರ ನಗರದಿಂದ ಮಹಾಲಕ್ಷ್ಮೀ ಲೇಔಟ್ ಮಾರ್ಗವಾಗಿ ಸ್ಕೂಟರ್‌ನಲ್ಲಿ ಸಿರಿ ತೆರಳುತ್ತಿದ್ದರು. ಅದೇ ಮಾರ್ಗದಲ್ಲಿ ಅತಿವೇಗವಾಗಿ ಬಂದಿದ್ದ ವಿನಯ್​ನ ಬೈಕ್, ಯುವತಿ ಸಿರಿಯ ಸ್ಕೂಟರ್‌ಗೆ ಡಿಕ್ಕಿಯಾಗಿತ್ತು. ಹೆಲ್ಮೆಟ್ ಧರಿಸದ ಕಾರಣ ತೀವ್ರವಾಗಿ ತಲೆಗೆ ಪೆಟ್ಟಾಗಿದ್ದರಿಂದ ವಿನಯ್‌ನನ್ನ ಸಮೀಪದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ವಿನಯ್ ಮೆದುಳು ನಿಷ್ಕ್ರಿಯಗೊಂಡಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಮಲ್ಲೇಶ್ವರಂ ಸಂಚಾರ ಠಾಣೆಯ ಪೊಲೀಸರು ಭೇಟಿ ನೀಡಿದ್ದು ತಪಾಸಣೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.

Must Read