Monday, October 6, 2025

ಆರ್‌ಎಸ್‌ಎಸ್ ಶತಮಾನೋತ್ಸವಕ್ಕೆ ಸಾಕ್ಷಿಯಾಗಿರುವ ನಮ್ಮ ಪೀಳಿಗೆ ಅದೃಷ್ಟವಂತ : ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದೆಹಲಿಯ ಡಾ. ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಇಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಸಮಾರಂಭ ನಡೆಯಿತು.

ಪ್ರಧಾನಿ ನರೇಂದ್ರ ಮೋದಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಈ ಸಂದರ್ಭದಲ್ಲಿ ವಿಶೇಷ ಅಂಚೆ ಚೀಟಿ ಮತ್ತು 100 ರೂಪಾಯಿ ನಾಣ್ಯವನ್ನು ಬಿಡುಗಡೆ ಮಾಡಿದರು.

ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ, ಕೇಂದ್ರ ಸಚಿವರು, ಹಿರಿಯ ಕಾರ್ಯಕರ್ತರು ಮತ್ತು ಸಾಮಾಜಿಕ ಗಣ್ಯರು ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಹೊಸ ನಾಣ್ಯವನ್ನು ಬಿಡುಗಡೆ ಮಾಡಿದರು.

ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಮಾತನಾಡಿ ಇಂದು ಮಹಾನವಮಿ. ಎಲ್ಲರಿಗೂ ನವರಾತ್ರಿ ಶುಭಾಶಯಗಳು. ನಾಳೆ ವಿಜಯದಶಮಿ, ಅನ್ಯಾಯದ ಮೇಲೆ ನ್ಯಾಯದ, ಕತ್ತಲೆಯ ಮೇಲೆ ಬೆಳಕಿನ ವಿಜಯದ ಹಬ್ಬವಾಗಿದೆ. 100 ವರ್ಷಗಳ ಹಿಂದೆ ಆರ್‌ಎಸ್‌ಎಸ್ ಈ ದಿನವೇ ಸ್ಥಾಪನೆಯಾಯಿತು. ಇದು ಕಾಕತಾಳೀಯವಲ್ಲ ಎಂದು ಹೇಳಿದರು.

ಶತಮಾನೋತ್ಸವ ಸಾಕ್ಷಿಯಾಗಿರುವ ನಮ್ಮ ಪೀಳಿಗೆ ಅದೃಷ್ಟವಂತ. ದೇಶ ಸೇವೆಗೆ ಸಮರ್ಪಿವಾದತ ಎಲ್ಲ ಸ್ವಯಂಸೇವಕರಿಗೆ ಶುಭಾಶಯಗಳು ಎಂದರು. ಆರ್‌ಎಸ್‌ಎಸ್‌ನ 100 ವರ್ಷಗಳ ಸೇವೆಯನ್ನು ಗುರುತಿಸಲು ಬಿಡುಗಡೆಯಾದ ಅಂಚೆ ಚೀಟಿ ಮತ್ತು ನಾಣ್ಯವು ಐತಿಹಾಸಿಕವೆಂದು ಅವರು ಒತ್ತಿ ಹೇಳಿದರು.