Wednesday, October 8, 2025

ಪಿಒಕೆಯಲ್ಲಿ ಭುಗಿಲೆದ್ದ ಹಿಂಸಾಚಾರ: ಪಾಕ್ ಸೇನೆಯ ಗುಂಡಿನ ದಾಳಿಗೆ ಎಂಟು ಮಂದಿ ಬಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಾಕ್ ಆಕ್ರಮಿತ ಕಾಶ್ಮೀರ ಭಾಗದಲ್ಲಿ ಹಿಂಸಾಚಾರ ಮುಂದುವರಿದಿದೆ. ಪಿಒಕೆಯ ವಿವಿಧೆಡೆ ಇಂದು ಬುಧವಾರ ಒಟ್ಟು ಎಂಟಕ್ಕೂ ಹೆಚ್ಚು ನಾಗರಿಕರು ಪಾಕ್ ಸೇನೆಯ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ.

ಪಾಕಿಸ್ತಾನ ಸರ್ಕಾರದ ದಮನಕಾರಿ ನೀತಿ ವಿರುದ್ಧ ಪಿಒಕೆಯಲ್ಲಿ ಕಳೆದ ಮೂರು ದಿನಗಳಿಂದ ತೀವ್ರತರವಾದ ಪ್ರತಿಭಟನೆಗಳು ಹಿಂಸಾರೂಪಕ್ಕೆ ತಿರುಗಿವೆ. ಈ ಪ್ರತಿಭಟನೆಯನ್ನು ಹತ್ತಿಕ್ಕಲು ಸರ್ಕಾರವು ಸೇನೆಯ ನೆರವನ್ನು ಬಳಸಿದೆ.

ಬಾಘ್ ಜಿಲ್ಲೆಯ ಧೀರ್​ಕೋಟ್​​ನಲ್ಲಿ ನಾಲ್ವರು ಬಲಿಯಾಗಿದ್ದಾರೆ. ಮುಜಾಫರಾಬಾದ್ ಮತ್ತು ಮೀರ್​ಪುರ್​ನಲ್ಲಿ ತಲಾ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ನಿನ್ನೆ ಮಂಗಳವಾರ ಮುಜಾಫರಾಬಾದ್​ನಲ್ಲಿ ಇಬ್ಬರು ಸತ್ತಿದ್ದರು. ಕಳೆದ ಮೂರು ದಿನದಲ್ಲಿ ಪಿಒಕೆ ಪ್ರತಿಭಟನೆಯಲ್ಲಿ ಬಲಿಯಾದವರ ಸಂಖ್ಯೆ 10ಕ್ಕೆ ಏರಿದೆ. ಮುಜಾಫರಾಬಾದ್​ನಲ್ಲಿ ಸಾವಿನ ಸಂಖ್ಯೆ 4ಕ್ಕೆ ಏರಿದೆ.

error: Content is protected !!