Tuesday, October 7, 2025

IND vs WI | ಟೆಸ್ಟ್ ಸರಣಿ ಆರಂಭ: ಟಾಸ್ ಗೆದ್ದ ವೆಸ್ಟ್ ಇಂಡೀಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಟೆಸ್ಟ್ ಸರಣಿ ಇಂದು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆರಂಭಗೊಂಡಿದೆ. ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದು, ಟೀಮ್ ಇಂಡಿಯಾ ಫೀಲ್ಡಿಂಗ್‌ಗೆ ಇಳಿದಿದೆ. ಈ ಸರಣಿ ಮೂಲಕ ಎರಡೂ ತಂಡಗಳು ಭಾರೀ ಪೈಪೋಟಿ ನಡೆಸಲು ಸಜ್ಜಾಗಿವೆ.

ಭಾರತ ಪ್ಲೇಯಿಂಗ್ ಇಲೆವೆನ್:
ಶುಭಮನ್ ಗಿಲ್ ನಾಯಕತ್ವ ವಹಿಸಿಕೊಂಡಿರುವ ಭಾರತ ಟೆಸ್ಟ್ ತಂಡದಲ್ಲಿ ಅನುಭವಿಗಳೊಂದಿಗೆ ಹೊಸ ಮುಖಗಳಿಗೂ ಅವಕಾಶ ನೀಡಲಾಗಿದೆ. ಯಶಸ್ವಿ ಜೈಸ್ವಾಲ್ ಮತ್ತು ಕೆಎಲ್ ರಾಹುಲ್ ಆರಂಭಿಕ ಬ್ಯಾಟ್ಸ್‌ಮನ್‌ಗಳಾಗಿ ಕಣಕ್ಕಿಳಿದಿದ್ದಾರೆ. ಸಾಯಿ ಸುದರ್ಶನ್, ನಾಯಕ ಗಿಲ್, ವಿಕೆಟ್‌ ಕೀಪರ್ ಧ್ರುವ್ ಜುರೆಲ್, ನಿತೀಶ್ ಕುಮಾರ್ ರೆಡ್ಡಿ ಮಧ್ಯಮ ಕ್ರಮಾಂಕ ಬಲಪಡಿಸಿದ್ದಾರೆ. ಆಲ್‌ರೌಂಡರ್‌ಗಳಾದ ರವೀಂದ್ರ ಜಡೇಜಾ ಮತ್ತು ವಾಷಿಂಗ್ಟನ್ ಸುಂದರ್ ಜೊತೆ ಸ್ಪಿನ್ ಜೋಡಿ ಕುಲ್ದೀಪ್ ಯಾದವ್ ಆಡುತ್ತಿದ್ದಾರೆ. ಪೇಸ್ ಅಟ್ಯಾಕ್‌ನ್ನು ಜಸ್‌ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಮುನ್ನಡೆಸುತ್ತಿದ್ದಾರೆ.

ವೆಸ್ಟ್ ಇಂಡೀಸ್ ಪ್ಲೇಯಿಂಗ್ ಇಲೆವೆನ್:
ರೋಸ್ಟನ್ ಚೇಸ್ ನೇತೃತ್ವದ ವಿಂಡೀಸ್ ತಂಡದಲ್ಲಿ ತೇಜ್‌ನರೈನ್ ಚಂದ್ರಪಾಲ್ ಮತ್ತು ಜಾನ್ ಕ್ಯಾಂಪ್ಬೆಲ್ ಆರಂಭಿಕರಾಗಿ ಇಳಿದಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಅಲಿಕ್ ಅಥನಾಝ್, ಬ್ರಾಂಡನ್ ಕಿಂಗ್, ಶೈ ಹೋಪ್ ಪ್ರಮುಖ ಪಾತ್ರವಹಿಸಲಿದ್ದಾರೆ. ಬೌಲಿಂಗ್‌ನಲ್ಲಿ ಜೋಮೆಲ್ ವಾರಿಕನ್, ಖಾರಿ ಪಿಯರೆ, ಜೇಡನ್ ಸೀಲ್ಸ್ ಸೇರಿದಂತೆ ಜೋಹಾನ್ ಲೇನ್ ತಂಡದ ನಿರೀಕ್ಷೆ ಹೆಚ್ಚಿಸಿದ್ದಾರೆ.

ಇದಕ್ಕೂ ಮೊದಲು ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ 100 ಟೆಸ್ಟ್ ಪಂದ್ಯಗಳು ನಡೆದಿದ್ದು, ಅವುಗಳಲ್ಲಿ ವಿಂಡೀಸ್ 30 ಪಂದ್ಯಗಳಲ್ಲಿ ಗೆದ್ದು ಮೇಲುಗೈ ಸಾಧಿಸಿದೆ. ಭಾರತ 23 ಪಂದ್ಯಗಳಲ್ಲಿ ಜಯಗಳಿಸಿದ್ದು, 47 ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿವೆ. ಆದರೆ, 2002ರಿಂದ ವಿಂಡೀಸ್ ಭಾರತ ವಿರುದ್ಧ ಸರಣಿ ಗೆಲ್ಲದೆ ಬಂದಿದ್ದು, ಇತ್ತೀಚಿನ ಇತಿಹಾಸದಲ್ಲಿ ಭಾರತ ಪ್ರಾಬಲ್ಯ ಸಾಧಿಸಿದೆ.