Friday, October 3, 2025

ಭಾರತವನ್ನು ಕೆಣಕಲು ವಿದೇಶಿ ಅಸ್ತ್ರ ಬಳಸುತ್ತಿರುವ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಮತ್ತು ಅದರ ಸಾಂವಿಧಾನಿಕ ಸಂಸ್ಥೆಗಳನ್ನು ಕೆಣಕಲು ಪದೇ ಪದೇ ವಿದೇಶಿ ಮಣ್ಣನ್ನು ಆಯ್ಕೆ ಮಾಡಿಕೊಳ್ಳುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ತೆಲಂಗಾಣ ರಾಜ್ಯ ಬಿಜೆಪಿ ತೀವ್ರವಾಗಿ ಖಂಡಿಸಿದೆ.

ನರೇಂದ್ರ ಮೋದಿ ಸರ್ಕಾರವನ್ನು ಗುರಿಯಾಗಿಸಿಕೊಂಡು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಭಾರತಕ್ಕೆ ಇರುವ ದೊಡ್ಡ ಬೆದರಿಕೆ “ಪ್ರಜಾಪ್ರಭುತ್ವದ ಮೇಲಿನ ದಾಳಿ” ಎಂದು ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿಯ ಮುಖ್ಯ ವಕ್ತಾರ ಮತ್ತು ಮಾಧ್ಯಮ ಉಸ್ತುವಾರಿ ಎನ್ ವಿ ಸುಭಾಷ್, “ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್‌ನ ಸಾಗರೋತ್ತರ ಸಂಚಾಲಕ ಸ್ಯಾಮ್ ಪಿತ್ರೋಡಾ ಅವರು ಪಾಕಿಸ್ತಾನವನ್ನು ಮತ್ತು ಅದರ ನಿರಂತರ ಗಡಿಯಾಚೆಗಿನ ಭಯೋತ್ಪಾದನಾ ಚಟುವಟಿಕೆಗಳನ್ನು ಸಮರ್ಥಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.