ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ತಂಡದ ಕಿಕ್ರೆಟಿಗ ಅಜಿಂಕ್ಯ ರಹಾನೆ ದಕ್ಷಿಣ ಕನ್ನಡ ಜಿಲ್ಲೆ ಮುಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದಿದ್ದಾರೆ. ಈ ಸಂದರ್ಭ ದೇವಸ್ಥಾನದ ಅರ್ಚಕ ಗೋಪಾಲಕೃಷ್ಣ ಭಟ್ ಅವರು ರಹಾನೆಗೆ ಪ್ರಾರ್ಥನೆ ಸಲ್ಲಿಸಿ ಪ್ರಸಾದ ನೀಡಿದರು.
ಅಜಿಂಕ್ಯ ರಹಾನೆಯ ಬಪ್ಪನಾಡು ಭೇಟಿ ಸ್ಥಳೀಯರಿಗೆ ಸಂತೋಷ ಉಂಟುಮಾಡಿದ್ದು, ಅಭಿಮಾನಿಗಳು ತಮ್ಮ ನೆಚ್ಚಿನ ಕಿಕ್ರೆಟಿಗನನ್ನು ನೋಡಿ ಸಂತೋಷಪಟ್ಟರು. ಮುಲ್ಕಿಯಲ್ಲಿ ನಡೆಯುತ್ತಿರುವ ಪಿಲಿನಲಿಕೆ 10ನೇ ವರ್ಷದ ಸಂಭ್ರಮ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಅವರು ಭಾಗವಹಿಸಿದ್ದರು.