Thursday, November 20, 2025

ಬಿಹಾರದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ: ನಾಲ್ವರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಹಾರದ ಪೂರ್ಣಿಯಾ ಜಿಲ್ಲೆಯಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿಯಾಗಿ ನಾಲ್ವರು ಮೃತಪಟ್ಟ ಘಟನೆ ನಡೆದಿದೆ. ಶುಕ್ರವಾರ ಬೆಳಗ್ಗೆ ಜೋಗಬಾನಿಯಿಂದ ಪಾಟಲಿಪುತ್ರದತ್ತ ತೆರಳುತ್ತಿದ್ದ ರೈಲು, ಪೂರ್ಣಿಯಾ ಪಟ್ಟಣದ ಬಳಿ ಮೇಳವೊಂದರಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿ ಮರಳುತ್ತಿದ್ದವರ ಮೇಲೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.

ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಜಿಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ನಡುವೆ ಅಪಘಾತಕ್ಕೆ ರೈಲ್ವೆ ಕ್ರಾಸಿಂಗ್ ಸಿಬ್ಬಂದಿಯ ನಿರ್ಲಕ್ಷ್ಯ ಕಾರಣವೇ ಅಥವಾ ಜನರು ವೇಗದ ರೈಲನ್ನು ಲೆಕ್ಕಿಸದೇ ದಾಟಲು ಪ್ರಯತ್ನಿಸಿದರೇ ಎಂಬ ವಿಷಯ ಇನ್ನೂ ಸ್ಪಷ್ಟವಾಗಿಲ್ಲ.

ರೈಲ್ವೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣದ ತನಿಖೆ ಆರಂಭಿಸಿದ್ದಾರೆ. ಸ್ಥಳೀಯರು ಘಟನೆಗೆ ಆಘಾತ ವ್ಯಕ್ತಪಡಿಸಿದ್ದು, ಭವಿಷ್ಯದಲ್ಲಿ ಇಂತಹ ದುರಂತ ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

error: Content is protected !!