ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಹಮದಾಬಾದ್ನ ನರೇಂದ್ರ ಮೋದಿ ಮೈದಾನದಲ್ಲಿ ನಡೆಯುತ್ತಿರುವ ಭಾರತ ಹಾಗೂ ವೆಸ್ಟ್ ಇಂಡೀಸ್ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟದಂದು ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಧ್ರುವ್ ಜುರೆಲ್ ತಮ್ಮ ಟೆಸ್ಟ್ ವೃತ್ತಿಜೀವನದ ಮೊದಲ ಶತಕ ಸಿಡಿಸಿ ಮಿಂಚಿದ್ದಾರೆ.
ನಾಯಕ ಶುಭ್ಮನ್ ಗಿಲ್ ಔಟಾದ ನಂತರ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಬಂದ ಜುರೆಲ್, ಕೆಎಲ್ ರಾಹುಲ್ ಜೊತೆಗೆ ಉತ್ತಮ ಜೊತೆಯಾಟ ಕಟ್ಟಿದರು. ಈ ಹಂತದಲ್ಲಿ ರಾಹುಲ್ ಶತಕ ಬಾರಿಸಿ ಔಟಾದರೆ, ಜುರೆಲ್ ಮಾತ್ರ ತಮ್ಮ ತಾಳ್ಮೆಯ ಆಟವನ್ನು ಮುಂದುವರೆಸಿದರು. ಇತ್ತ ಜುರೆಲ್ಗೆ ಉಪನಾಯಕ ರವೀಂದ್ರ ಜಡೇಜಾ ಅವರಿಂದಲೂ ಉತ್ತಮ ಸಾಥ್ ಸಿಕ್ಕಿತು. ಹೀಗಾಗಿ ಎರಡನೇ ದಿನದ ಮೂರನೇ ಸೆಷನ್‌ನಲ್ಲಿ ಜುರೆಲ್ 190 ಎಸೆತಗಳಲ್ಲಿ ತಮ್ಮ ಮೊದಲ ಟೆಸ್ಟ್ ಶತಕವನ್ನು ಪೂರೈಸಿದರು.
ತಮ್ಮ ಶತಕದ ಹಾದಿಯಲ್ಲಿ 12 ಬೌಂಡರಿ ಮತ್ತು ಎರಡು ಸಿಕ್ಸರ್‌ಗಳನ್ನು ಬಾರಿಸಿದ ಜುರೆಲ್ ಇದರೊಂದಿಗೆ ಭಾರತ ಪರ ಟೆಸ್ಟ್ ಶತಕ ಗಳಿಸಿದ 12 ನೇ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಎನಿಸಿಕೊಂಡರು.