ಹೊಸದಿಗಂತ ಡಿಜಿಟಲ್ ಡೆಸ್ಕ್:
ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಮ್ಯಾಚ್ ನಲ್ಲಿ ಟೀಂ ಇಂಡಿಯಾದ ಉಪನಾಯಕತ್ವ ವಹಿಸಿಕೊಂಡು ಆಲ್ರೌಂಡರ್ ರವೀಂದ್ರ ಜಡೇಜಾ ಟೆಸ್ಟ್ ವೃತ್ತಿಜೀವನದ 6ನೇ ಶತಕವನ್ನು ಪೂರೈಸಿದ್ದಾರೆ. ಇದರೊಂದಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಆರು ಶತಕಗಳನ್ನುಬಾರಿಸಿದ್ದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ರವೀಂದ್ರ ಜಡೇಜಾ, ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿಯೂ ತಮ್ಮ ಅದ್ಭುತ ಪ್ರದರ್ಶನವನ್ನು ಪುನರಾವರ್ತಿಸಿದರು ಶತಕ ಗಳಿಸಿದರು. ತಮ್ಮ ಶತಕದ ಇನ್ನಿಂಗ್ಸ್ನಲ್ಲಿ 168 ಎಸೆತಗಳನ್ನು ಎದುರಿಸಿದ ಜಡೇಜಾ 5 ಸಿಕ್ಸರ್‌ಗಳು ಮತ್ತು 6 ಬೌಂಡರಿಗಳನ್ನು ಬಾರಿಸಿದರು.