ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಮೇಟಿಕುರ್ಕೆ ಬಳಿ ಕಾರು ಪಲ್ಟಿ ಹೊಡೆದ ಪರಿಣಾಮ ಮಗು ಸೇರಿ ಮೂವರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.
ಯಾದಗಿರಿ ಮೂಲದ ಮಲ್ಲಮ್ಮ(26), ಸರೋಜಮ್ಮ(25) ಮತ್ತು ಪುಟ್ಟ ಮಗು ಮೃತರು. ಸ್ಥಳಕ್ಕೆ ಡಿವೈಎಸ್ಪಿ ಶಿವಕುಮಾರ್ ಮತ್ತು ಸಿಪಿಐ ಗುಡ್ಡಪ್ಪ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಹಿರಿಯೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.