ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಾದ್ಯಂತ ಇಂದು ಮಳೆಯ ನಡುವೆ ತಾಪಮಾನದಲ್ಲಿ ಸ್ವಲ್ಪ ಏರಿಳಿತ ಕಂಡುಬಂದಿದೆ. ಕೆಲವು ಜಿಲ್ಲೆಗಳಲ್ಲಿ ತೇವಭರಿತ ವಾತಾವರಣ ಮುಂದುವರಿದರೆ, ಕೆಲವೆಡೆ ಮೋಡ ಕವಿದ ವಾತಾವರಣದಿಂದ ತಂಪು ಅನುಭವವಾಗಿದೆ. ಹವಾಮಾನ ಇಲಾಖೆ ಬಿಡುಗಡೆ ಮಾಡಿದ ಅಂದಾಜು ಪ್ರಕಾರ ಪ್ರಮುಖ ನಗರಗಳ ತಾಪಮಾನ ವಿವರ ಹೀಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮೈಸೂರಿನಲ್ಲಿ ತಾಪಮಾನ ಸ್ವಲ್ಪ ಹೆಚ್ಚಾಗಿ ಗರಿಷ್ಠ 32 ಹಾಗೂ ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.