Saturday, October 11, 2025

ಲಾರಿ ಬಸ್ ನಡುವೆ ಡಿಕ್ಕಿ: ಕೆಲ ಪ್ರಯಾಣಿಕರಿಗೆ ಗಂಭೀರ ಗಾಯ

ಹೊಸದಿಗಂತ ವರದಿ ವಿಜಯಪುರ:

ಲಾರಿ ಹಾಗೂ ಸಾರಿಗೆ ಬಸ್ ಡಿಕ್ಕಿಯಾಗಿ ಕೆಲ ಪ್ರಯಾಣಿಕರು ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ
ದೇವರಹಿಪ್ಪರಗಿ ಪಟ್ಟಣ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಮೆಕ್ಕೆಜೋಳ ತುಂಬಿಕೊಂಡು ಹೋಗುತ್ತಿದ್ದ ಲಾರಿ, ಸಾರಿಗೆ ಬಸ್ ಡಿಕ್ಕಿ ಹೊಡೆದಿದ್ದು, ಕೆಲವರು ಗಂಭೀರ ಗಾಯಗೊಂಡಿದ್ದು, ಇನ್ನು ಕೆಲ ಪ್ರಯಾಣಿಕರಿಗೆ ಸಣ್ಣ, ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ವಿಜಯಪುರ, ಸಿಂದಗಿ ಹಾಗೂ ದೇವರಹಿಪ್ಪರಗಿ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.

ಸ್ಥಳಕ್ಕೆ ಶಾಸಕ ಅಶೋಕ ಮನಗೂಳಿ, ದೇವರಹಿಪ್ಪರಗಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ದೇವರಹಿಪ್ಪರಗಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!