ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಹೊರವಲಯ ನೆಲಮಂಗಲ ತಾಲ್ಲೂಕಿನ ಬೂದಿಹಾಳ್ ಗೇಟ್ ಬಳಿ ಶನಿವಾರ ಬೆಳಗ್ಗೆ ಈರುಳ್ಳಿ ತುಂಬಿದ್ದ ಲಾರಿ ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ಚಿತ್ರದುರ್ಗದಿಂದ ದಾಸನಪುರ ಎಪಿಎಂಸಿಗೆ ಸಾಗುತ್ತಿದ್ದಾಗ ಮಾರ್ಗ ಮಧ್ಯೆ ಲಾರಿಯ ಇಂಜಿನ್‌ನಲ್ಲಿ ಶಾರ್ಟ್‌ಸರ್ಕ್ಯೂಟ್ ಉಂಟಾದುದರಿಂದ ಬೆಂಕಿ ಹೊತ್ತಿಕೊಂಡಿದೆ.
ಈ ಘಟನೆದ ಪರಿಣಾಮ ಲಕ್ಷಾಂತರ ರೂಪಾಯಿಯ ಈರುಳ್ಳಿ ನಾಶವಾಗಿದೆ. ಲಾರಿಯ ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ನೆಲಮಂಗಲ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.