January18, 2026
Sunday, January 18, 2026
spot_img

ಆಸ್ಟ್ರೇಲಿಯಾ ಪ್ರವಾಸಕ್ಕೆ ಟೀಮ್ ಇಂಡಿಯಾ ರೆಡಿ: ಪಂತ್, ಪಾಂಡ್ಯ ಔಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ವೆಸ್ಟ್ ಇಂಡೀಸ್ ವಿರುದ್ಧದ ಸರಣಿ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ, ಇದೀಗ ಆಸ್ಟ್ರೇಲಿಯಾ ಪ್ರವಾಸಕ್ಕೆ ಕಾಲಿಡಲು ಸಜ್ಜಾಗಿದೆ. ಈ ಬಾರಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಕ್ರಿಕೆಟ್ ಹೋರಾಟ ಅಭಿಮಾನಿಗಳಿಗೆ ಅದ್ಭುತ ರೋಮಾಂಚನವನ್ನು ನೀಡಲಿದೆ. ಅಕ್ಟೋಬರ್ 19ರಿಂದ ಪ್ರಾರಂಭವಾಗುವ ಈ ಪ್ರವಾಸದಲ್ಲಿ ಒಟ್ಟು ಎಂಟು ಪಂದ್ಯಗಳನ್ನು ಆಡಲಾಗುತ್ತಿದ್ದು, ಮೊದಲಿಗೆ ಏಕದಿನ ಸರಣಿ ಬಳಿಕ ಟಿ20 ಸರಣಿ ನಡೆಯಲಿದೆ. ಆದರೆ ಈ ಮಹತ್ವದ ಸರಣಿಗೆ ಟೀಮ್ ಇಂಡಿಯಾದ ಇಬ್ಬರು ಪ್ರಮುಖ ಆಟಗಾರರು ಅಲಭ್ಯರಾಗುತ್ತಿದ್ದಾರೆ ಎಂಬುದು ಅಭಿಮಾನಿಗಳಿಗೆ ನಿರಾಶೆ ತಂದಿದೆ.

ಭಾರತದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್, ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಗಾಯಗೊಂಡ ಬಳಿಕ ಇನ್ನೂ ಸಂಪೂರ್ಣ ಚೇತರಿಸಿಕೊಳ್ಳದ ಕಾರಣ, ಆಸ್ಟ್ರೇಲಿಯಾ ಪ್ರವಾಸದಿಂದ ಹೊರಗುಳಿದಿದ್ದಾರೆ. ಪಂತ್ ಬದಲಿಗೆ ಹೆಚ್ಚುವರಿ ವಿಕೆಟ್ ಕೀಪರ್ ಆಗಿ ಸಂಜು ಸ್ಯಾಮ್ಸನ್ ತಂಡಕ್ಕೆ ಅವಕಾಶ ಪಡೆಯುವ ಸಾಧ್ಯತೆ ಇದೆ.

ಭಾರತದ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ, ಏಷ್ಯಾಕಪ್ ಸೂಪರ್-4 ಹಂತದಲ್ಲಿ ಸ್ನಾಯು ಸೆಳೆತಕ್ಕೆ ಒಳಗಾದ ಕಾರಣದಿಂದ ಸರಣಿಗೆ ಅಲಭ್ಯರಾಗಿದ್ದಾರೆ. ಅವರ ಬದಲಿಗೆ ಯುವ ಆಲ್ರೌಂಡರ್ ನಿತೀಶ್ ಕುಮಾರ್ ರೆಡ್ಡಿಗೆ ಅವಕಾಶ ನೀಡಲಾಗುವ ನಿರೀಕ್ಷೆ ಇದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಈ ಪ್ರವಾಸದಲ್ಲಿ ಮೊದಲಿಗೆ ಮೂರು ಏಕದಿನ ಪಂದ್ಯಗಳ ಸರಣಿ ನಡೆಯಲಿದೆ. ನಂತರ ಅಕ್ಟೋಬರ್ 29ರಿಂದ ಐದು ಟಿ20 ಪಂದ್ಯಗಳ ಸರಣಿ ಪ್ರಾರಂಭವಾಗಲಿದೆ.

Must Read

error: Content is protected !!