ಹೊಸದಿಗಂತ ಡಿಜಿಟಲ್ ಡೆಸ್ಕ್:
ನವೆಂಬರ್ ಗೆ ಯಾವ ಕ್ರಾಂತಿ ಇಲ್ಲ, ಮುಖ್ಯಮಂತ್ರಿ ಕುರ್ಚಿಯಲ್ಲಿ ಸಿದ್ದರಾಮಯ್ಯ ಕುಳ್ತಿದ್ದಾರೆ. 5 ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿರ್ತಾರೆ. ಸ್ವತಃ ಡಿಕೆ ಶಿವಕುಮಾರ್ ಕೂಡ ಹೇಳಿದ್ದಾರೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ಇಂದು ಮಡ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮೈಸೂರಿನಲ್ಲಿ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ 5 ವರ್ಷನಾನೇ ಸಿಎಂ. ನಮ್ಮ ಪಕ್ಷ ಹೈಕಮಾಂಡ್ ತೀರ್ಮಾನ ಮಾಡುತ್ತೆ. ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ದವಾಗಿದ್ದೇವೆ ಎಂದರು.
ಅವರವರ ಬೆಂಬಲಿಗರಿಗೆ ಮುಖ್ಯಮಂತ್ರಿ ಆಗಬೇಕು ಅನ್ನೋದು ಆಸೆ ಇರುತ್ತೆ. ನಮ್ಮ ಅಧ್ಯಕ್ಷರೆ ಯಾರ ಬಗ್ಗೆ ಮಾತನಾಡಬಾರದು ಅಂತ ಸೂಚನೆ ಕೊಟ್ಟಿದ್ದಾರೆ. ವ್ಯಕ್ತಿಗಿಂತ ಪಕ್ಷ ಮುಖ್ಯ. ಯಾರಾದರೂ ಮಾತನಾಡಿದ್ರೆ ಕ್ರಮಕ್ಕೆ ಸೂಚನೆ ಕೊಟ್ಟಿದ್ದಾರೆ. ಈಗಾಗಲೇ ಹಲವರಿಗೆ ನೋಟೀಸ್ ಕೊಟ್ಟಿದ್ದಾರೆ. ಸದ್ಯಕ್ಕೆ ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಎಂದರು.