ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಸ್ಪಿನ್ನರ್‌ಗಳ ಮೋಡಿಯಿಂದ ವೆಸ್ಟ್ ಇಂಡೀಸ್ ತಂಡ 2ನೇ ಇನ್ನಿಂಗ್ಸ್‌ನಲ್ಲಿ ಕೇವಲ 146 ರನ್‌ಗಳಿಗೆ ಆಲೌಟ್ ಆಗಿದೆ. ಪರಿಣಾಮ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ 140 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ.
ಮೊದಲ ಇನ್ನಿಂಗ್ಸ್‌ನಲ್ಲಿ 2ನೇ ದಿನದ ಅಂತ್ಯಕ್ಕೆ 448 ರನ್ ಗಳಿಸಿದ್ದ ಭಾರತ 286 ರನ್‌ಗಳ ಮುನ್ನಡೆ ಕಾಯ್ದುಕೊಂಡಿತ್ತು. 3ನೇ ದಿನ ಡಿಕ್ಲೇರ್ ಘೋಷಿಸುತ್ತಿದ್ದಂತೆ ಕಣಕ್ಕಿಳಿದ ವಿಂಡೀಸ್ 2ನೇ ಇನ್ನಿಂಗ್ಸ್‌ನಲ್ಲೂ ಭಾರತದ ಸ್ಪಿನ್ನರ್‌ಗಳ ದಾಳಿಗೆ ಪತರುಗುಟ್ಟಿತು. ಹೀಗಾಗಿ ಮೂರನೇ ದಿನವೇ ಭಾರತ ಗೆಲುವು ಸಾಧಿಸಿತು.
2ನೇ ಇನ್ನಿಂಗ್ಸ್‌ನಲ್ಲಿ ಭಾರತದ ಪರ ರವೀಂದ್ರ ಜಡೇಜಾ 4 ವಿಕೆಟ್ ಕಿತ್ತರೆ, ಸಿರಾಜ್ 3 ವಿಕೆಟ್, ಕುಲ್‌ದೀಪ್ ಯಾದವ್ 2 ವಿಕೆಟ್, ವಾಷಿಂಗ್ಟನ್ ಸುಂದರ್ 1 ವಿಕೆಟ್ ಪಡೆದು ಮಿಂಚಿದರು.
ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿದ ಬಳಿಕ ಭಾರತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ 3ನೇ ಸ್ಥಾನ ಕಾಯ್ದುಕೊಂಡಿದೆ. 40 ಅಂಕಗಳು, 55.56 ಪಿಸಿಟಿಯೊಂದಿಗೆ 3ನೇ ಸ್ಥಾನದಲ್ಲಿದ್ದರೆ, 36 ಅಂಕ 100 ಪಿಟಿಸಿ ಗಳಿಸಿರುವ ಆಸ್ಟ್ರೇಲಿಯಾ ಅಗ್ರಸ್ಥಾನದಲ್ಲಿದೆ. 66.67 ಪಿಸಿಟಿಯೊಂದಿಗೆ ಶ್ರೀಲಂಕಾ 2ನೇ ಸ್ಥಾನದಲ್ಲಿದೆ.