ಹೊಸದಿಗಂತ ಡಿಜಿಟಲ್ ಡೆಸ್ಕ್:
ನಮ್ಮ ಮೆಟ್ರೋ ರೈಲು ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಪ್ರಯಾಣಿಕನನ್ನು ರಕ್ಷಿಸಿರುವ ಸಿಬ್ಬಂದಿಗಳು, ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ.
ಬೆಂಗಳೂರಿನ ಮೆಜೆಸ್ಟಿಕ್ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಮಾದವಾರ-ರೇಷ್ಮೆ ಸಂಸ್ಥೆ ಹಸಿರು ಮಾರ್ಗದ ಹಳಿಗೆ ವ್ಯಕ್ತಿಯೊಬ್ಬ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದನು.ಹೀಗಾಗಿ ರೈಲಿನ ಅಡಿಯಲ್ಲಿ ಯುವಕ ಸಿಲುಕಿಕೊಂಡಿದ್ದನು. ಇದೀಗ ಮೆಟ್ರೋ ರೈಲಿನಡಿ ಸಿಲುಕಿದ್ದಂತ ಯುವಕನನ್ನು ರಕ್ಷಿಸಲಾಗಿದೆ. ಗಾಯಗೊಂಡಿರುವ ಆತನನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.