Sunday, October 12, 2025

ರೋಹಿತ್ ಬಿಟ್ಟು ಗಿಲ್‌ಗೆ ನಾಯಕ ಪಟ್ಟ ಯಾಕೆ?: ಅಜಿತ್ ಅಗರ್ಕರ್ ಕೊಟ್ಟ ಉತ್ತರವೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ಕ್ರಿಕೆಟ್ ತಂಡ ಪ್ರಕಟವಾಗಿದೆ.

ಭಾರತಕ್ಕೆ ಐಸಿಸಿ ಟಿ20 ವಿಶ್ವಕಪ್ ಹಾಗೂ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದುಕೊಟ್ಟ ನಾಯಕ ರೋಹಿತ್ ಶರ್ಮಾ ಅವರನ್ನು ಕೆಳಗಿಳಿಸಿ, ಶುಭ್‌ಮನ್ ಗಿಲ್‌ಗೆ ಭಾರತ ಏಕದಿನ ತಂಡದ ನಾಯಕ ಪಟ್ಟ ಕಟ್ಟಲಾಗಿದೆ. ಇನ್ನು ಶ್ರೇಯಸ್ ಅಯ್ಯರ್ ಉಪನಾಯಕನಾಗಿ ನೇಮಕವಾಗಿದ್ದಾರೆ.

ಈ ಕುರಿತಂತೆ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಹೊಸ ಬಾಂಬ್ ಸಿಡಿಸಿದ್ದಾರೆ.

ನಾಯಕತ್ವ ಬದಲಾವಣೆ ಕುರಿತಂತೆ ನಾವು ರೋಹಿತ್ ಶರ್ಮಾ ಜತೆ ಮಾತನಾಡಿದ್ದೇವೆ. ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ 2027ರ ಏಕದಿನ ವಿಶ್ವಕಪ್ ಆಡುವ ಬಗ್ಗೆ ಇನ್ನೂ ಸ್ಪಷ್ಟ ತೀರ್ಮಾನ ಹೊಂದಿಲ್ಲ ಎಂದು ಅಗರ್ಕರ್ ತಿಳಿಸಿದ್ದಾರೆ.

ಪ್ರಾಕ್ಟಿಕಲ್ ಆಗಿ ಮೂರು ಮಾದರಿಯ ಕ್ರಿಕೆಟ್‌ಗೆ ಮೂವರು ನಾಯಕರಿರುವುದು ಅಷ್ಟೊಂದು ಸೂಕ್ತವಲ್ಲ. ಅದರಲ್ಲೂ ಈಗ ಏಕದಿನ ಕ್ರಿಕೆಟ್‌ ಮಾದರಿಯಲ್ಲಿ ಕಡಿಮೆ ಪಂದ್ಯಗಳು ನಡೆಯುತ್ತಿವೆ. ಏಕದಿನ ಮಾದರಿಯಲ್ಲಿ ಗಿಲ್‌ಗೆ ತಂಡ ಕಟ್ಟಲು ಸಾಕಷ್ಟು ಸಮಯ ನೀಡುವ ಉದ್ದೇಶದಿಂದ ನಾಯಕತ್ವ ಪಟ್ಟ ಕಟ್ಟಲಾಗಿದೆ ಎಂದು ಅಗರ್ಕರ್ ಹೇಳಿದ್ದಾರೆ.

ಈ ಮೂಲಕ ಅಜಿತ್ ಅಗರ್ಕರ್, 2027ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಭಾರತ ತಂಡದಲ್ಲಿ ಸ್ಥಾನ ಪಡೆಯೋದು ಅನುಮಾನ ಎನ್ನುವಂತ ಪರೋಕ್ಷ ಸಂದೇಶವನ್ನು ರವಾನಿಸಿದ್ದಾರೆ.

ಆಸ್ಟ್ರೇಲಿಯಾ ಎದುರಿನ ಏಕದಿನ ಸರಣಿಗೆ ಭಾರತ ತಂಡ ಹೀಗಿದೆ:
ಶುಭ್‌ಮನ್ ಗಿಲ್(ನಾಯಕ), ಶ್ರೇಯಸ್ ಅಯ್ಯರ್(ಉಪನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆ ಎಲ್ ರಾಹುಲ್(ವಿಕೆಟ್ ಕೀಪರ್,), ಯಶಸ್ವಿ ಜೈಸ್ವಾಲ್, ಧ್ರುವ್ ಜುರೆಲ್(ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಶದೀಪ್ ಸಿಂಗ್, ಪ್ರಸಿದ್ದ್ ಕೃಷ್ಣ.

error: Content is protected !!