Sunday, October 12, 2025

ವಿಧಾನಸಭಾ ಚುನಾವಣೆಗೆ ಬಿರುಸಿನ ಸಿದ್ಧತೆ: ಬಿಹಾರಕ್ಕೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಭೇಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂಬರುವ ಬಿಹಾರ ವಿಧಾನಸಭಾ ಚುನಾವಣಾ ಸಿದ್ಧತೆಗಳನ್ನು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನೇತೃತ್ವದ ಚುನಾವಣಾ ಆಯೋಗ ಅಂತಿಮ ಸಿದ್ಧತೆಗಳ ಕುರಿತು ಹಿರಿಯ ಅಧಿಕಾರಿಗಳಿಂದ ಸಭೆ ನಡೆಸಿತು.

ಜಿಲ್ಲಾಧಿಕಾರಿಗಳು, ಪೊಲೀಸ್ ಮಹಾ ನಿರೀಕ್ಷಕರು, ಪೊಲೀಸ್ ಮಹಾ ನಿರ್ದೇಶಕರು, ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲಿಸಿ ಚುನಾವಣೆ ಸಿದ್ಧತೆ ಕುರಿತಂತೆ ಮಾಹಿತಿ ಸಂಗ್ರಹಿಸಿತು.

ಈ ವೇಳೆ ಚುನಾವಣಾ ಆಯುಕ್ತರಾದ ಡಾ. ಸುಖಬೀರ್ ಸಿಂಗ್ ಸಂಧು ಮತ್ತು ಡಾ. ವಿವೇಕ್ ಜೋಷಿ ಸೇರಿದಂತೆ ನಿಯೋಗ, ಆಡಳಿತ ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ಚುನಾವಣಾ ಸಿದ್ಧತೆ, ಕಾನೂನು ಮತ್ತು ಸುವ್ಯವಸ್ಥೆ ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆ ಸಮಾಲೋಚನಾ ಸಭೆ ನಡೆಸಿತು. ಇದಕ್ಕೂ ಮುನ್ನ ಚುನಾವಣಾ ಸಿದ್ಧತೆ ಕುರಿತಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಮಾಲೋಚಿಸಿತು. ಚುನಾವಣಾ ಆಯೋಗದ ತಂಡ ನಾಳೆ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿ ಕುರಿತು ನೋಡಲ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಯನ್ನು ನಡೆಸಲು ಎಲ್ಲ ಕಠಿಣ ಕ್ರಮಗಳನ್ನು ಕೈಗೊಳ್ಳುವ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದೆ.

error: Content is protected !!