Monday, October 13, 2025

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಮತ್ತಷ್ಟು ವೇಗ: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಮೀಕ್ಷೆ ಆರಂಭ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭವಾಗಿದ್ದು, ೧೭ ಸಾವಿರ ಸಮೀಕ್ಷಾದಾರರನ್ನು ನೇಮಕ ಮಾಡಲಾಗಿದೆ ಎಂದು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದ್ದಾರೆ.

ಬೆಂಗಳೂರಿನ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಬ್ಬರಂತೆ ಕೆ.ಎ.ಎಸ್ ಹಿರಿಯ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳೆಂದು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಒಟ್ಟು ೩೪ ಕೆ.ಎ.ಎಸ್ ಅಧಿಕಾರಿಗಳಿಗೆ ಸಮೀಕ್ಷಾ ಕಾರ್ಯವನ್ನು ಸುಗಮವಾಗಿ ನಿರ್ವಹಿಸಲು ಸೂಕ್ತ ಜವಾಬ್ದಾರಿ ನೀಡಲಾಗಿದೆ ಎಂದು ತಿಳಿಸಿದ್ದರು. ಇನ್ನು ಜಿಬಿಎ ವ್ಯಾಪ್ತಿಯಲ್ಲಿ ಇಂದಿನಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯ ಆರಂಭವಾಗಿದ್ದು, ನಗರದ ಎಲ್ಲಾ ನಾಗರಿಕರು ಆಧಾರ್ ಕಾರ್ಡ್, ರೇಷನ್ ಕಾರ್ಡ್ ಸೇರಿದಂತೆ ಇತರ ದಾಖಲೆಗಳೊಂದಿಗೆ ಸಮೀಕ್ಷಾದಾರರಿಗೆ ಸಹಕರಿಸುವಂತೆ ಮುಖ್ಯ ಆಯುಕ್ತರು ತಿಳಿಸಿದ್ದಾರೆ.

error: Content is protected !!