Monday, October 13, 2025

ಬೆಳೆಹಾನಿ ಸಮೀಕ್ಷೆ ಕಾರ್ಯ ಪೂರ್ಣಗೊಂಡ ಬೆನ್ನಿಗೇ ಅತಿವೃಷ್ಟಿಯಿಂದ ಹಾನಿಗೊಳಗಾದ 9 ಜಿಲ್ಲೆಗಳಲ್ಲಿ ಪರಿಹರ ಕಾರ್ಯ: ಸಿಎಂ ಸಿದ್ದು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ 9 ಜಿಲ್ಲೆಗಳಲ್ಲಿ ಸಂಚರಿಸಿ ಪರಿಶೀಲನೆ ನಡೆಸಿದ್ದು, ಬೆಳಹಾನಿ ಸಮೀಕ್ಷೆ ಕಾರ್ಯ ಶೇಕಡಾ 30 ರಿಂದ 50 ರಷ್ಟು ಆಗಿದೆ. ಅದು ಪೂರ್ಣಗೊಂಡ ತಕ್ಷಣ ಪರಿಹರ ಕಾರ್ಯ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅವರು, ಇಂದು ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ನೂತನ ಕಟ್ಟಡ ಹಾಗೂ ಗೃಹ ವೈದ್ಯರ ವಸತಿ ನಿಲಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ಹಾಗೂ ಪ್ರಧಾನ ಮಂತ್ರಿ ಉಷಾ ಯೋಜನೆಯಡಿ ನಿರ್ಮಿತವಾಗುತ್ತಿರುವ ವಿವಿಧ ಕಟ್ಟಡಗಳ ಶಂಕುಸ್ಥಾಪನೆ ಬೆಳಗಾವಿಯಲ್ಲಿ ನೆರವೇರಿಸಿ ಮಾತನಾಡಿದರು.

ಖುಷ್ಕಿ ಜಮೀನಿನ ಬೆಳೆಹಾನಿಗೆ ರಾಜ್ಯ ಸರ್ಕಾರ ಹಾಗೂ ಕೇಂದ್ರದ ಪ್ರಕೃತಿ ವಿಕೋಪ ಪರಿಹಾರ ನಿಧಿ ಒಳಗೊಂಡು ತಲಾ ಎಂಟೂವರೆ ಸಾವಿರದಂತೆ ಪ್ರತಿ ಹೆಕ್ಟರ್‌ಗೆ 17 ಸಾವಿರ ರೂಪಾಯಿಗಳು, ನೀರಾವರಿ ಜಮೀನಿನ ಬೆಳೆಹಾನಿಗೆ 21 ಸಾವಿರ ಹಾಗೂ ಬಹುಬೆಳೆಗೆ 31 ಸಾವಿರ ರೂಪಾಯಿಗಳ ಪರಿಹಾರ ನೀಡಲಾಗುವುದು. ಈ ಹಿಂದೆ ಇಷ್ಟೊಂದು ಪ್ರಮಾಣದಲ್ಲಿ ಪರಿಹಾರ ನೀಡಲಾಗಿಲ್ಲ ಎಂದು ಮುಖ್ಯಮಂತ್ರಿ ತಿಳಿಸಿದರು.

error: Content is protected !!