Monday, October 13, 2025

ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ: 1,200 ವೃತ್ತಿಪರ ಪ್ರಯೋಗಾಲಯಗಳಿಗೆ ಚಾಲನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಯುವಜನರ ಸಬಲೀಕರಣಕ್ಕೆ ಸಂಬಂಧಿಸಿದಂತೆ ಸುಮಾರು 62 ಸಾವಿರ ಕೋಟಿ ರೂಪಾಯಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ವಿಜ್ಞಾನ ಭವನ ಅನಾವರಣಗೊಳಿಸಿದರು.

ಯುವಜನರಲ್ಲಿ ಕೌಶಲ್ಯ ನಿರ್ಮಾಣಕ್ಕಾಗಿ ದೇಶಾದ್ಯಂತ ಒಂದು ಸಾವಿರ ಸರ್ಕಾರಿ ಐಟಿಐ ಸಂಸ್ಥೆಗಳ ಸ್ಥಾಪನೆಗಾಗಿ ಪಿಎಂ -ಸೇತು ಯೋಜನೆ, 34 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ನವೋದಯ ವಿದ್ಯಾಲಯ ಹಾಗೂ ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ಸ್ಥಾಪಿಸಿರುವ ಒಂದು ಸಾವಿರದ 200 ವೃತ್ತಿಪರ ಪ್ರಯೋಗಾಲಯಗಳಿಗೂ ಈ ಸಂದರ್ಭದಲ್ಲಿ ಪ್ರಧಾನಿ ಚಾಲನೆ ನೀಡಿದರು.

error: Content is protected !!