ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರದೇಶದ ಛಿಂದ್ವಾರಾದಲ್ಲಿ ಮಕ್ಕಳಿಗೆ ಕೋಲ್ಡ್ರಿಫ್ ಸಿರಪ್ ಶಿಫಾರಸು ಮಾಡಿದ ವೈದ್ಯನನ್ನು ಬಂಧಿಸಲಾಗಿದೆ.
ಕಲುಷಿತ ಕೆಮ್ಮಿನ ಸಿರಪ್ ಸೇವಿಸಿದ 11 ಮಕ್ಕಳ ಸಾವಿಗೆ ದೇಶಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಹೆಚ್ಚಿನ ಮಕ್ಕಳಿಗೆ ಪರಾಸಿಯಾದ ಮಕ್ಕಳ ತಜ್ಞ ಡಾ. ಪ್ರವೀಣ್ ಸೋನಿ ಅವರ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಧ್ಯಪ್ರದೇಶ ಸರ್ಕಾರವು ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಿಸಿದ ತಮಿಳುನಾಡಿನ ಕಾಂಚಿಪುರಂ ಜಿಲ್ಲೆಯಲ್ಲಿರುವ ಶ್ರೀಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ವಿರುದ್ಧವೂ ಪ್ರಕರಣ ದಾಖಲಿಸಿದೆ. ಸರ್ಕಾರವು ಈ ಹಿಂದೆ ಕೋಲ್ಡ್ರಿಫ್ ಮಾರಾಟವನ್ನು ನಿಷೇಧಿಸಿತ್ತು. ಔಷಧದ ಮಾದರಿಗಳಲ್ಲಿ 48.6% ಡೈಥಿಲೀನ್ ಗ್ಲೈಕೋಲ್ ಇದೆ. ಇದು ಅತ್ಯಂತ ವಿಷಕಾರಿ ವಸ್ತುವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಚೆನ್ನೈನ ಔಷಧ ಪರೀಕ್ಷಾ ಪ್ರಯೋಗಾಲಯದಲ್ಲಿ ಸರ್ಕಾರಿ ಔಷಧ ವಿಶ್ಲೇಷಕರು ಪರೀಕ್ಷಿಸಿದ ಸಿರಪ್‌ನ ಮಾದರಿಯನ್ನು ತಮಿಳುನಾಡು ಔಷಧ ನಿಯಂತ್ರಣ ನಿರ್ದೇಶನಾಲಯವು ಪ್ರಮಾಣಿತ ಗುಣಮಟ್ಟದಲ್ಲಿಲ್ಲ ಎಂದು ಘೋಷಿಸಿತು.