Sunday, October 12, 2025

ನವೆಂಬರ್‌ನಲ್ಲಿ ಯಾವ ಕ್ರಾಂತಿಯೂ ಆಗೋದಿಲ್ಲ: ವಿಜಯೇಂದ್ರ ಮಾತಿಗೆ ಸಿಎಂ ತಿರುಗೇಟು

ಹೊಸದಿಗಂತ ವರದಿ ಕೊಪ್ಪಳ:

ರಾಜ್ಯದಲ್ಲಿ ನವೆಂಬರ್ ತಿಂಗಳಲ್ಲಿ ಯಾವುದೇ ಕ್ರಾಂತಿ ಯೂ ಇಲ್ಲ ಬ್ರಾಂತಿಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು.

ಬಸಾಪುರದ ಲಘು ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಕ್ರಾಂತಿಯೂ ಆಗೋದಿಲ್ಲ ಎಂದು ಹೇಳಿದ್ದಾರೆ. ಈ ಹಿಂದೆ ಬಿ.ವೈ. ವಿಜಯೇಂದ್ರ ನವೆಂಬರ್‌ನಲ್ಲಿ ರಾಜ್ಯ ರಾಜಕೀಯದಲ್ಲಿ ಕ್ರಾಂತಿ ಆಗಲಿದೆ. ಎಲ್ಲವೂ ಅಲ್ಲೋಲ ಕಲ್ಲೋಲ ಆಗಲಿದೆ ಎಂದು ಹೇಳಿದ್ದರು. ಈ ಮಾತಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಬೇರೆ ರಾಜ್ಯದಲ್ಲಿ ಮಕ್ಕಳಿಗೆ ಕೆಮ್ಮುಗೆ ಹಾಕುವ ಸಿರಪ್ ನಿಂದ ಮಕ್ಕಳು ಮೃತಪಟ್ಟಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಈ ಬಗ್ಗೆ ಆರೋಗ್ಯ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದರು.

error: Content is protected !!