Sunday, October 12, 2025

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ವೇನಲ್ಲಿ ಸರಣಿ ಅಪಘಾತ: 10ಕ್ಕೂ ಹೆಚ್ಚು ಮಂದಿಗೆ ಗಾಯ, ಇಬ್ಬರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್‌ ವೇಯಲ್ಲಿ ಸರಣಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.

ಸುಮಾರು 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ಬಂಗಾರಪೇಟೆ, ಕೆಜಿಎಫ್ ಹಾಗೂ ಕೋಲಾರ ಆಸ್ಪತ್ರೆಗೆ ರವಾಸಲಾಗಿದೆ.

ಬೆಂಗಳೂರು-ಚೆನೈ ಎಕ್ಸ್‌ಪ್ರೆಸ್‌ ವೇನಲ್ಲಿ ಟೆಂಪೋ ವಾಹನಕ್ಕೆ ಈಚರ್ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಟೆಂಪೋ, ಆ್ಯಂಬುಲೆನ್ಸ್​​ಗೆ ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ. ಸದ್ಯ ಸ್ಥಳಕ್ಕೆ ಎಸ್​ಪಿ ಶಿವಾಂಶು ರಜಪೂತ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

error: Content is protected !!